ದಾವಣಗೆರೆ: ಜೆಡಿಎಸ್ ಪಕ್ಷಕ್ಕೆ 5 ವರ್ಷಗಳ ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ಒಪ್ಪಂದ ಮಾಡಿಕೊಟ್ಟಿದೆ. ಹೀಗಾಗಿ ಬೇರೆ ಸಿಎಂ ಬಗ್ಗೆ ಚರ್ಚೆಮಾಡುವುದು ಅನವಶ್ಯಕವೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನಗರದ ಬಾಪೂಜಿ ಅತಿಥಿ ಗೃಹದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಸಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ನಾವುಗಳು 5 ವರ್ಷಗಳ ಕಾಲ ಯಾವುದೇ ಬೇರೆ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡುವುದಿಲ್ಲವೆಂದು ಒಪ್ಪಂದ ಮಾಡಿಕೊಟ್ಟಿದ್ದೇವೆ. ಹೀಗಾಗಿ ಒಪ್ಪಂದ ಮುಗಿಯುವವರೆಗೂ ಬೇರೆ ಸಿಎಂ ಬಗ್ಗೆ ಚರ್ಚೆ ಮಾಡುವುದು ಅನಾವಶ್ಯಕವೆಂದರು. ಇದನ್ನೂ ಓದಿ: ಒಂದು ಕಾಲ್, ಒಂದು ಡೋಸ್, ಒಂದು ಒಪ್ಪಂದ- ಚೆಕ್ ಕೊಟ್ಟು ಗೆದ್ದ ಎಚ್‍ಡಿಡಿ
Advertisement
Advertisement
ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ಮಾತನಾಡಿ, ಕಾರ್ಯಕರ್ತರು ಯಾವುದೇ ಊಹಾಪೋಹಳಿಗೆ ಕಿವಿಕೊಡಬಾರದು, ಸಮ್ಮಿಶ್ರ ಸರ್ಕಾರ ಐದು ವರ್ಷಗಳ ಕಾಲ ಸುಭದ್ರವಾಗಿರುತ್ತದೆ. ಸಮ್ಮಿಶ್ರ ಸರ್ಕಾರ ಉರುಳಿಸುವ ವಿಚಾರ ಕೇವಲ ವಂದತಿಯಾಗಿದೆ. ಮೈಸೂರು ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ನಮ್ಮ ಸರ್ಕಾರದ ಅವಧಿಯಲ್ಲಿ ಆಗಿರುವ ಕೆಲಸಗಳ ಬಗ್ಗೆ ನಾವು ಹೇಳಿಕೊಳ್ಳುತ್ತೇವೆ. ಜೆಡಿಎಸ್‍ಗೆ ಕಳೆದ ಐದು ವರ್ಷಗಳ ಅಭಿವೃದ್ಧಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಹೀಗಾಗಿ ಅವರು ತಮ್ಮ ಅವಧಿಯಲ್ಲಿ ಆದ ಕೆಲಸಗಳ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ ಅಷ್ಟೇ ಎಂದು ತಿಳಿಸಿದರು. ಇದನ್ನೂ ಓದಿ : ಎಚ್‍ಡಿಡಿ ಮುಂದೆ 18 ಪುಟಗಳ ಒಪ್ಪಂದಕ್ಕೆ ಸಹಿ- ಮೈತ್ರಿ ಸುಗಮಕ್ಕೆ 6 ಸೂತ್ರ
Advertisement
Advertisement
ಮಾಜಿ ಸಚಿವ ಎ.ಮಂಜು ಹಾಗೂ ರೇವಣ್ಣ ನಡುವಿನ ವಾಕ್ಸಮರಕ್ಕೆ ಬಗ್ಗೆ ಮಾತನಾಡಿದ ಅವರು, ಹಾಸನ ಹಾಗೂ ಮಂಡ್ಯದ ರಾಜಕೀಯವೇ ಬೇರೆ. ಅದನ್ನು ರಾಜ್ಯ ರಾಜಕೀಯಕ್ಕೆ ಹೋಲಿಕೆ ಮಾಡುವಂತಿಲ್ಲ. ರೇವಣ್ಣ ಪವರ್ ಮಿನಿಸ್ಟರ್ ಹಾಗೂ ನಮ್ಮ ಸರ್ಕಾರದ ಸಚಿವರು. ಅವರ ಬಗ್ಗೆ ನಾವು ಏನು ಹೇಳಲು ಬಯಸುವುದಿಲ್ಲವೆಂದು, ಪರೋಕ್ಷವಾಗಿ ರೇವಣ್ಣ ಪವರ್ ಮಿನಿಸ್ಟರ್ ಎಂದು ಒಪ್ಪಿಕೊಂಡರು. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ದೂರು ನೀಡಿ ಕಾಂಗ್ರೆಸ್ಸಿಗೆ 3 ಷರತ್ತು ವಿಧಿಸಿದ ದೇವೇಗೌಡರು!
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv