ನವದೆಹಲಿ: ವಂದೇ ಭಾರತ್ ರೈಲುಗಳ (Vande Bharat train) ಮೇಲೆ ಕಲ್ಲುತೂರಾಟದಂತಹ (Stone Pelting) ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ದಕ್ಷಿಣ ಮಧ್ಯ ರೈಲ್ವೆ (SCR) ಮಂಗಳವಾರ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಜನರು ಇಂತಹ ಕೃತ್ಯದಲ್ಲಿ ತೊಡಗೊದ್ದೇ ಆದಲ್ಲಿ ಅಂತಹ ಅಪರಾಧಿಗಳಿಗೆ 5 ವರ್ಷಗಳ ವರೆಗೆ ಜೈಲು ಶಿಕ್ಷೆಯನ್ನು ವಿಸ್ತರಿಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಇತ್ತೀಚೆಗೆ ತೆಲಂಗಾಣದ ವಿವಿಧೆಡೆ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದ ಹಲವಾರು ನಿದರ್ಶನಗಳು ವರದಿಯಾದ ಬಳಿಕ ಈ ಎಚ್ಚರಿಕೆಯನ್ನು ನೀಡಲಾಗಿದೆ. ವಂದೇ ಭಾರತ್ ರೈಲುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವ 9 ಘಟನೆಗಳು ಜನವರಿಯಿಂದ ವರದಿಯಾಗಿದೆ. ಇದನ್ನೂ ಓದಿ: Karnataka Election 2023- ಮೇ 10 ರಂದು ಮತದಾನ, ಮೇ 13ಕ್ಕೆ ಫಲಿತಾಂಶ
Advertisement
Advertisement
2019 ರ ಫೆಬ್ರವರಿಯಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಾರಂಭವಾದಾಗಿನಿಂದ ರೈಲುಗಳ ಮೇಲೆ ತೆಲಂಗಾಣ, ಬಿಹಾರ, ಉತ್ತರ ಪ್ರದೇಶ, ಛತ್ತೀಸ್‌ಗಢ ಹಾಗೂ ಪಶ್ಚಿಮ ಬಂಗಾಳದಲ್ಲಿ ದಾಳಿ ಮಾಡಲಾಗಿದೆ. ಈ ಬಗ್ಗೆ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇದುವರೆಗೆ 39 ಅಪರಾಧಿಗಳನ್ನು ರೈಲ್ವೇ ರಕ್ಷಣಾ ಪಡೆ (RPF) ಬಂಧಿಸಿದೆ.
Advertisement
ರೈಲುಗಳ ಮೇಲೆ ಕಲ್ಲು ತೂರಾಟ ಮಾಡುವುದು ಕ್ರಿಮಿನಲ್ ಅಪರಾಧವಾಗಿದ್ದು, ಅವರ ವಿರುದ್ಧ ರೈಲ್ವೆ ಕಾಯ್ದೆಯ ಸೆಕ್ಷನ್ 153ರ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದು 5 ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಗೆ ಗುರಿಯಾಗುತ್ತದೆ ಎಂದು ಎಸ್‌ಸಿಆರ್ ತಿಳಿಸಿದೆ. ಇದನ್ನೂ ಓದಿ: ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಪ್ರಕರಣ- ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ವಶಕ್ಕೆ