ಮಂಗಳೂರು: ಸ್ನಾನ ಮಾಡಲೆಂದು ಸಿದ್ಧಪಡಿಸಿದ್ದ ಬಿಸಿ ನೀರು ಮೈಮೇಲೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಐದು ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರಿನ ಬೆದ್ರಾಳದ ರಮೇಶ್ ಗೌಡ ಎಂಬವರ ಪುತ್ರಿ ತನ್ವಿ(5) ಮೃತಪಟ್ಟ ಬಾಲಕಿ. ಎರಡು ದಿನಗಳ ಹಿಂದೆ ಮನೆಯಲ್ಲಿ ಸ್ನಾನಕ್ಕೆಂದು ಸಿದ್ಧಪಡಿಸಿದ್ದ ಬಿಸಿ ನೀರು ಆಕಸ್ಮಿಕವಾಗಿ ಬಾಲಕಿಯ ಮೇಲೆ ಬಿದ್ದಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ತನ್ವಿಯನ್ನು ಪೋಷಕರು ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಸೇರಿಸಿದ್ದರು. ಒಂದು ದಿನ ಚಿಕಿತ್ಸೆ ನೀಡಿದ ಅಲ್ಲಿನ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳುವಂತೆ ಸೂಚಿಸಿದ್ದರು.
ವೈದ್ಯರ ಸೂಚನೆ ಮೇರೆಗೆ ಪೋಷಕರು ಬಾಲಕಿಯನ್ನು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆಸ್ಪತ್ರೆಗೆ ಕರೆತರುವಾಗಲೇ ಮಗು ಮೃತಪಟ್ಟಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಪುತ್ತೂರಿನ ಧನ್ವಂತರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ವಹಿಸಿದ್ದರಿಂದಲೇ ಮಗಳು ಸಾವಿಗೀಡಾಗಿದ್ದಾಳೆಂದು ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews