ನವದೆಹಲಿ: ದೇಶದಲ್ಲಿ ಕೊರೊನಾ ವ್ಯಾಕ್ಸಿನ್ ಡ್ರೈವ್ ಶುರುವಾಗಿ 6 ತಿಂಗಳು ಕಳೆದಿದೆ. ಜನವರಿ 16 ರಂದು ದೇಶದಲ್ಲಿ ಲಸಿಕಾ ಅಭಿಯಾನ ಆರಂಭವಾಗಿತ್ತು. ಅಲ್ಲಿಂದ ಇಲ್ಲಿವರೆಗೆ 50 ಕೋಟಿ ಡೋಸ್ ಹಂಚಿಕೆಯಾಗಿದೆ ಎಂದು ಪ್ರಧಾನಿ ಮೋದಿ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಸರ್ವರಿಗೂ ಉಚಿತ ಲಸಿಕೆ ಹಾಕುವ ಕಾರ್ಯಕ್ಕೆ ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸಿತ್ತು, ಹಂತ ಹಂತವಾಗಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದ ಕೇಂದ್ರ ಸರ್ಕಾರ ನಿನ್ನೆಗೆ 50 ಕೋಟಿಗೂ ಹೆಚ್ಚು ಡೋಸ್ ವಿತರಣೆಯಾಗಿದೆ ಎಂದು ತಿಳಿಸಿದೆ. ಶುಕ್ರವಾರ 43.29 ಲಕ್ಷ ಡೋಸ್ ಸೇರಿ ದೇಶದಲ್ಲಿ ಬೃಹತ್ ಕೋವಿಡ್ ಲಸಿಕೆ ಅಭಿಯಾನದಲ್ಲಿ ವಿತರಣೆಯಾಗಿರುವ ಲಸಿಕೆಗಳ ಒಟ್ಟು ಸಂಖ್ಯೆ 50 ಕೋಟಿ ಡೋಸ್ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.
ಕೋವಿಡ್-19 ವಿರುದ್ಧದ ಭಾರತದ ಹೋರಾಟವು ಬಲವಾದ ಉತ್ತೇಜನವನ್ನು ಪಡೆದಿದ್ದು, ಲಸಿಕೆಯ ಡೋಸ್ ಸಂಖ್ಯೆಗಳು 50 ಕೋಟಿ ಗಡಿ ದಾಟಿದೆ ನಮ್ಮ ಲಸಿಕಾ ಅಭಿಯಾನದಡಿ ಲಸಿಕೆ ಹಾಕುವುದನ್ನು ಮುಂದುವರಿಸುತ್ತೇವೆ ಎಂದು ನಾವು ಖಚಿತಪಡಿಸುತ್ತೇನೆ ಎಂದು ಮೋದಿ ಟ್ಟಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
India’s fight against COVID-19 receives a strong impetus. Vaccination numbers cross the 50 crore mark. We hope to build on these numbers and ensure our citizens are vaccinated under #SabkoVaccineMuftVaccine movement.
— Narendra Modi (@narendramodi) August 6, 2021
ದೇಶದಲ್ಲಿ ಜನವರಿ 16 ರಂದು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕುವ ಮೂಲಕ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಬಳಿಕ ಎರಡನೇ ಹಂತದಲ್ಲಿ ಫ್ರಂಟ್ ಲೈನ್ ವರ್ಕರ್ಸ್ ಗೆ ಫೆಬ್ರವರಿ 2 ರಿಂದ ಲಸಿಕೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಬಳಿಕ ಮಾರ್ಚ್ 1 ರಿಂದ ಸಾರ್ವಜನಿಕರಿಗೆ ಲಸಿಕೆ ಅಭಿಯಾನ ಆರಂಭಗೊಂಡಿತ್ತು. ಮೂರನೇ ಹಂತದ ಅಭಿಯಾನದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಗಂಭೀರ ಆರೋಗ್ಯ ಸಮಸ್ಯೆ ಇರುವವರಿಗೆ ಲಸಿಕೆ ನೀಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಇದನ್ನೂ ಓದಿ: ಲಸಿಕೆ ಅಭಿಯಾನದಲ್ಲಿ ಕೇಂದ್ರ ಸರ್ಕಾರದಿಂದ ಕನ್ನಡಿಗರಿಗೆ ತಾರತಮ್ಯವಾಗುತ್ತಿದೆ-ಹೆಚ್.ಡಿ ಕುಮಾರಸ್ವಾಮಿ
ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕುವ ಯೋಚನೆ ಶುರುಮಾಡಿಕೊಂಡಿದ್ದ ಕೇಂದ್ರ ಸರ್ಕಾರವೂ ಬಳಿಕ ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಅವಕಾಶವನ್ನು ಮಾಡಿಕೊಟ್ಟಿತ್ತು.