ಬೆಂಗಳೂರು: ಮಂಕಿಪಾಕ್ಸ್ ಕಾಯಿಲೆಗೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 50 ಬೆಡ್ ಹಾಸಿಗೆ ಮೀಸಲು ಇಡಲಾಗಿದೆ ಎಂದು ವೈದ್ಯಕೀಯ ಸಚಿವ ಶರಣ ಪ್ರಕಾಶ್ ಪಾಟೀಲ್ (Dr Sharan Prakash Patil) ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಮಂಕಿಪಾಕ್ಸ್ (Monkeypox) ಕಾಯಿಲೆಗೆ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಸಂಬಂಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ – ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗೆ ದೂರು
ಜನರು ಯಾರು ಆತಂಕ ಪಡುವ ಅಗತ್ಯ ಇಲ್ಲ. ಮಂಕಿಪಾಕ್ಸ್ ನಮ್ಮ ದೇಶ ಮತ್ತು ನಮ್ಮ ರಾಜ್ಯದಲ್ಲಿ ಪತ್ತೆ ಆಗಿಲ್ಲ. ಹೀಗಿದ್ದರೂ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 50 ಹಾಸಿಗೆ ಮೀಸಲು ಇರಿಸಲಾಗಿದೆ. ತೀವ್ರ ನಿಗಾ ಘಟಕ (ಐಸಿಯು) ಬೆಡ್ ಸಿದ್ಧತೆಗೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಉಪ ಚುನಾವಣೆ ಮೇಲೆ ಕಾಂಗ್ರೆಸ್ ಕಣ್ಣು- ಚನ್ನಪಟ್ಟಣದಲ್ಲಿ ಉದ್ಯೋಗ ಮೇಳ ಆಯೋಜನೆ
ಈಗಾಗಲೇ ವಿಕ್ಟೋರಿಯಾದಲ್ಲಿ ಕಾಯಿಲೆ ಟೆಸ್ಟ್ ಮಾಡುವುದಕ್ಕೆ ವ್ಯವಸ್ಥೆ ಇದೆ. ಟೆಸ್ಟ್ ಜೊತೆಗೆ ಐಸೋಲೇಟ್‌ಗೆ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಏರ್ಪೋರ್ಟ್ ಗಳಲ್ಲಿ ಕ್ರಮಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಕ್ರಮವಹಿಸಲಿದೆ. ಸದ್ಯ 50 ಬೆಡ್ ಮೀಸಲು ಇಟ್ಟಿದ್ದು ಅಗತ್ಯ ಬಿದ್ದರೆ ಹೆಚ್ಚುವರಿ ಬೆಡ್ ಕೂಡ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯಪಾಲರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಪ್ರಾರ್ಥಿಸುವೆ: ಡಿಸಿಎಂ ಟಾಂಗ್