– ಸಿಎಂ ಆರೋಪ ಆಧಾರ ರಹಿತ ಎಂದ ಸಂಸದ
ಹಾವೇರಿ: ಮುಖ್ಯಮಂತ್ರಿಗಳು 50 ಜನ ಕಾಂಗ್ರೆಸ್‌ನ (Congress) ಶಾಸಕರನ್ನು ಖರೀದಿ ಮಾಡುತ್ತೇವೆ ಅಂತ ಆರೋಪ ಮಾಡಿದ್ದಾರೆ. 50 ಶಾಸಕರ ಖರೀದಿಗೆ 2,500 ಕೋಟಿ ರೂ. ಬೇಕಾಗುತ್ತದೆ. ಯಾರ ಬಳಿ ಇದೆ ಅಷ್ಟೊಂದು ಹಣ? ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಪ್ರಶ್ನೆ ಮಾಡಿದ್ದಾರೆ.
Advertisement
ಈ ಬಗ್ಗೆ ಹಾವೇರಿಯಲ್ಲಿ (Haveri) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಬ್ಬ ರಾಜಕಾರಣಿ ತನ್ನ ಅಸ್ತಿತ್ವಕ್ಕೆ ಧಕ್ಕೆ ಬಂದಾಗ, ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಆಪಾದನೆಯ ದಿಕ್ಕನ್ನ ಬೇರೆ ಕಡೆ ತಿರುಗಿಸಲು ಹೀಗೆ ಹೇಳುತ್ತಿದ್ದಾರೆ. ಅವರು ಬಹಳ ಗೊಂದಲದಿಂದ ಹತಾಶೆರಾಗಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ದೆಹಲಿಗೆ ಬರುತ್ತಿದ್ದಂತೆ ಗ್ಯಾಸ್ ಚೇಂಬರ್‌ಗೆ ಪ್ರವೇಶಿಸಿದಂತಾಯ್ತು: ಪ್ರಿಯಾಂಕಾ ಗಾಂಧಿ
Advertisement
Advertisement
ಸಿದ್ದರಾಮಯ್ಯ (Siddaramaih) ಮೂರುವರೆ ವರ್ಷ ನಾನೇ ಸಿ.ಎಂ ಅಂತಾರೆ. ಮತ್ತೊಂದು ಕಡೆ ನನಗೆ ಶಕ್ತಿ ಕೊಡಿ ಐದು ವರ್ಷ ಅಧಿಕಾರ ಪೂರ್ಣ ಮಾಡಬೇಕು ಅಂತಾರೆ. ಮಳೆ ಹಾನಿಗೆ ಸಾಕಷ್ಟು ಬೆಳೆಗಳು ಹಾನಿಯಾಗಿದೆ. ಒಂದೇ ಒಂದು ಪರಿಹಾರ ಬರುತ್ತಿಲ್ಲ, ಸರ್ಕಾರ ಗೊಂದಲದಲ್ಲಿದೆ. ಮುಸ್ಲಿಂ ಗುತ್ತಿಗೆದಾರರಿಗೆ ನಾಲ್ಕು ರಿಯಾಯಿತಿ ನೀಡುತ್ತೇವೆ ಎನ್ನುತ್ತಿದ್ದಾರೆ. ಆದರೆ ವಾಲ್ಮೀಕಿ ಹಗರಣ ಮತ್ತು ಮುಡಾ ಹಗರಣದಲ್ಲಿ ಕೂಡ ಸೈಟ್ ತೆಗೆದುಕೊಂಡಿಲ್ಲ ಎಂದು ಹೇಳಿ ವಾಪಸ್ ಕೊಡುತ್ತೇವೆ ಎನ್ನುತ್ತಾರೆ ಇದು ಯೂಟರ್ನ್ ಸರ್ಕಾರ ಎಂದು ಗುಡುಗಿದರು. ಇದನ್ನೂ ಓದಿ: ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ – ಪ್ರಾಥಮಿಕ ಶಾಲೆಗಳಲ್ಲಿ ಆನ್‌ಲೈನ್ ಕ್ಲಾಸ್
Advertisement
ಅಧಿಕಾರಿಗಳು ಬೇಸತ್ತು ಹೋಗಿದ್ದಾರೆ. ಅಧಿಕಾರಿ ಮೇಲೆ ದೊಡ್ಡ ಪ್ರಮಾಣದ ರಾಜಕೀಯ ಒತ್ತಡ ಹಾಕುತ್ತಾರೆ. ಪ್ರತಿಯೊಂದು ಇಲಾಖೆಯಲ್ಲಿ ಕಲೆಕ್ಷನ್ ಸೆಂಟರ್‌ಗಳು ಆಗಿದೆ. ಮುಖ್ಯಮಂತ್ರಿಗಳು ಇವತ್ತು ನನ್ನ ಮುಟ್ಟಿದರೆ ಜನರು ಸುಮ್ಮನೆ ಇರಲ್ಲ ಅಂದಿದ್ದಾರೆ. ಮುಖ್ಯಮಂತ್ರಿ ಹೇಳಿದಾಗ ಜನರು ಸುಮ್ಮನೆ ಇರುವುದಿಲ್ಲ ನಿಜ. ಜನರು ಪರವಾನಗಿ ಕೆಲಸ ಮಾಡಿದಾಗ ಮಾತ್ರ ಸುಮ್ಮನೆ ಇರಲ್ಲ. ಸರ್ಕಾರದ ದುರಾಡಳಿತ ವಿರುದ್ಧವು ಸಹ ಜನರು ಸುಮ್ಮನೆ ಇರಲ್ಲ ಎಂದು ಹೇಳಿದರು. ಇದನ್ನೂ ಓದಿ: ‘108’ ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್
ಸರ್ಕಾರ ಖಬರಸ್ಥಾನಕ್ಕೆ ನೂರಾರು ಎಕರೆ ಜಮೀನು ನೀಡಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಅದರಲ್ಲಿ ಆಶ್ಚರ್ಯ ಏನೂ ಇಲ್ಲ. ಇಂತಹ ಹಲವಾರು ನಿರ್ಣಯ ಮಾಡಿದ್ದಾರೆ. ಇವರು ತುಷ್ಠೀಕರಣ ರಾಜಕಾರಣ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ನೈತಿಕತೆ ಕುಸಿದು ಹೋಗಿದೆ. ಪೊಲೀಸ್ ಠಾಣೆಯ ಮೇಲೆ ದಾಳಿ ಆದರೂ ಕೇಸ್ ಮಾಡಲು ಪೋಲೀಸರು ಮುಂದೆ ಬಂದರು ಸಹ, ಅದನ್ನ ತೆಗೆದು ಹಾಕಲು ಸರ್ಕಾರ ಅನುಮೊದನೆ ನೀಡುತ್ತದೆ. ಅಲ್ಲದೆ ವಕ್ಫ್ ಬೋರ್ಡ್ ಎಂದು ಎಲ್ಲಾ ಕಡೆ ನೋಟಿಸ್ ಕೊಟ್ಟಿದ್ದಾರೆ. ನಾವು ಕೂಡಾ ಸಂಪೂರ್ಣವಾಗಿ ಕಾನೂನು ಹೋರಾಟ ಮಾಡುತ್ತೇವೆ. ಹಾವೇರಿ ಜಿಲ್ಲೆಯ ಜಮೀನು, ಮಠ, ಶಾಲೆ ,ಕೆರೆ ಅವುಗಳ ದಾಖಲೆಗಳನ್ನ ಕೊಟ್ಟರೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಹರಿಹಾಯ್ದರು. ಇದನ್ನೂ ಓದಿ: ಮೋದಿ ತಮ್ಮ ಜೀವನದಲ್ಲಿ ಒಮ್ಮೆಯೂ ಸಂವಿಧಾನ ಓದಿಲ್ಲ: ರಾಹುಲ್ ಗಾಂಧಿ