ಬೆಂಗಳೂರು: ಟ್ರಾಫಿಕ್ ಫೈನ್ (Traffic Fine) ಪಾವತಿಗೆ 50% ಡಿಸ್ಕೌಂಟ್ ನೀಡಿದ್ದಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು, 15 ದಿನಕ್ಕೆ ದಂಡದ ಪಾವತಿ ಮೊತ್ತ 45 ಕೋಟಿ ರೂ. ದಾಟಿದೆ.
ವಾಹನ ಮಾಲೀಕರು 16,21,721 ಬಾಕಿ ಕೇಸ್‌ಗಳಿಗೆ ದಂಡ ಪಾವತಿಸಿದ್ದು, ಇಲ್ಲಿವರೆಗೆ 45.52 ಕೋಟಿ ರೂ. ದಂಡ ಪಾವತಿಯಾಗಿದೆ. ಇದನ್ನೂ ಓದಿ: ಬಂಡೀಪುರ | ಸಫಾರಿ ವಾಹನವನ್ನು ಅಟ್ಟಾಡಿಸಿದ ಕಾಡಾನೆ – ವೀಡಿಯೋ ವೈರಲ್
ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic Police) ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿದ್ದರು. ಇನ್ನೂ ಸೆ.12ರವರೆಗೆ ದಂಡ ಪಾವತಿ ಮಾಡಲು ಕಾಲಾವಕಾಶವಿದ್ದು, ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ 2 ಮಕ್ಕಳ ತಂದೆಯಿಂದ ನಿರಂತರ ಅತ್ಯಾಚಾರ – ಹೆರಿಗೆಯಾದ ಅರ್ಧ ಗಂಟೆಯಲ್ಲೇ ಮಗು ಸಾವು
ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಅವರು ಆದೇಶ ಹೊರಡಿಸಿ, ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ಆ.23ರಿಂದ ಸೆ.12ರವರೆಗೂ ದಂಡದ ಕೇವಲ 50% ಮೊತ್ತವನ್ನು ಪಾವತಿಸುವಂತೆ ರಿಯಾಯಿತಿ ಘೋಷಿಸಿದ್ದರು. ಇದನ್ನೂ ಓದಿ: ಇಂದು ವರ್ಷದ ಕೊನೆಯ ಗ್ರಹಣ; ಮಧ್ಯಾಹ್ನವೇ ದೇವಾಲಯಗಳು ಬಂದ್ – ವಿಶೇಷ ಪೂಜೆ, ಪುನಸ್ಕಾರ