ಹಾವೇರಿ: ರಸ್ತೆಯ ಪಕ್ಕದಲ್ಲಿದ್ದ ಗುಂಡಿಗೆ ಬೈಕ್ ಸಮೇತ ಬಿದ್ದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಮಾಗನೂರು ಗ್ರಾಮದ ಬಳಿ ನಡೆದಿದೆ.
ಮೃತರನ್ನು 50 ವರ್ಷ ಜಮಾಲಸಾಬ್ ಎಂದು ಗುರುತಿಸಲಾಗಿದ್ದು, ಜಮಾಲಸಾಬ್ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಂದೇನಹಳ್ಳಿ ನಿವಾಸಿ ಎನ್ನಲಾಗಿದೆ. ಭಾನುವಾರ ರಾತ್ರಿ ರಟ್ಟೀಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದ ಕಡೆಯಿಂದ ಕಂದೇನಹಳ್ಳಿ ಗ್ರಾಮದ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ತುಂಗಾ ಮೇಲ್ದಂಡೆ ಯೋಜನೆ ಅಧಿಕಾರಿಗಳು ಪೈಪ್ ಲೈನ್ ಅಳವಡಿಕೆ ಮಾಡುವ ವೇಳೆ ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಬಹುತೇಕ ರಸ್ತೆ ಕೆಟ್ಟು ಹೋಗಿದ್ದು, ಇದರಿಂದ ಈ ದುರ್ಘಟನೆ ನಡೆದಿದೆ ಅಂತ ಸ್ಥಳೀಯರು ಮತ್ತು ಮೃತನ ಸಂಬಂಧಿಕರು ಯುಟಿಪಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಹಲಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv