– ಆಕ್ರೋಶ ವ್ಯಕ್ತವಾದ ಹಿನ್ನೆಲೆ ಕಾರ್ಯಕ್ರಮ ರದ್ದು
ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತ ಸಾರ್ವಜನಿಕ ಸಭೆ ಸಮಾರಂಭಗಳಿಗೆ ಅನುಮತಿಯ ಪಾಸ್ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ 500 ಜನ ಶಾಮಿಯಾನ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸುವ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.
Advertisement
ನಗರದ ಶ್ರೀನಿವಾಸ ಗಾರ್ಡನ್‍ನಲ್ಲಿ 500 ಜನ ಶಾಮಿಯಾನ ಕಾರ್ಮಿಕರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅನುಮತಿ ನೀಡಿತ್ತು. ಇದು ವಿವಾದಕ್ಕೆ ಕಾರಣವಾಗಿತ್ತು. ಕೋವಿಡ್-19 ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿರುವ 500 ಶಾಮಿಯಾನ ಕಾರ್ಮಿಕರನ್ನು ಒಂದೇ ಕಡೆ ಸೇರಿಸಿ, ಹುಬ್ಬಳ್ಳಿಯ ಶ್ರೀನಿವಾಸ ಗಾರ್ಡನ್‍ನಲ್ಲಿ ಆಹಾರ ಸಾಮಗ್ರಿಗಳ ಕಿಟ್‍ಗಳನ್ನು ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡುತ್ತಿದ್ದರು. ಆದರೆ ಇದೀಗ ಈ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.
Advertisement
ಸೋಮವಾರ ರಂಜಾನ್ ಹಬ್ಬದ ಪ್ರಯುಕ್ತ ಈದ್ಗಾ ಮೈದಾನಗಳಲ್ಲಿ ಕೇವಲ ಐದು ಜನರಿಗೆ ಮಾತ್ರ ಈದ್-ಉಲ್-ಫಿತರ್ ನಮಾಜ್ ಮಾಡಲು ಅನುಮತಿ ನೀಡಿ ಎಂದು ಸಮುದಾಯದವರು ಮನವಿ ಮಾಡಿದ್ದರು. ಈ ವಿಷಯ ನನ್ನ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಅನುಮತಿ ನೀಡಲು ನಿರಾಕರಿಸಿದ್ದರು ಎನ್ನಲಾಗಿದೆ.
Advertisement
Advertisement
ಈ ಬಗ್ಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ತಾಫ್ ಹುಸೇನ ಹಳ್ಳೂರ ಆಕ್ಷೇಪ ವ್ಯಕ್ತಪಡಿಸಿದ್ದು, ಕೇವಲ 5 ಜನರಿಗೆ ಸೇರಲು ಅನುಮತಿ ಕೊಡದ ಜಿಲ್ಲಾಡಳಿತ ಈಗ 500ಕ್ಕೂ ಹೆಚ್ಚು ಜನರನ್ನು ಸೇರಲು ಅನುಮತಿ ನೀಡಿದೆ. ಯಾವ ಮಾನದಂಡದ ಮೇಲೆ ಅನುಮತಿ ನೀಡಿದೆ ಎಂಬುದನ್ನು ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದ್ದರು. ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ ಈ ಕಾರ್ಯಕ್ರಮವನ್ನು ಇದೀಗ ರದ್ದು ಮಾಡಲಾಗಿದೆ.