ಇಂಫಾಲ್: ಬರೋಬ್ಬರಿ 500 ಕೋಟಿ ಮೌಲ್ಯದ ಡ್ರಗ್ಸ್‌ನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಮಣಿಪುರದ ಭಾರತ- ಮ್ಯಾನ್ಮಾರ್ ಗಡಿ ಸಮೀಪವಿರುವ ಮೊರೆ ಪಟ್ಟಣದಲ್ಲಿ ನಡೆದಿದೆ.
Advertisement
500 ಕೋಟಿ ಮೌಲ್ಯದ ಡ್ರಗ್ಸ್‌ನ್ನು ಅಸ್ಸಾಂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಾಜ್ಯ ಪೊಲೀಸರು ಮತ್ತು ಅಸ್ಸಾಂ ರೈಫಲ್ಸ್ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸರಿಸುಮಾರು 54 ಕೆಜಿಯ ಬ್ರೌನ್ ಶುಗರ್ ಮತ್ತು 154 ಕೆಜಿ ತೂಕದ 152 ಪ್ಯಾಕೆಟ್ ಕ್ರಿಸ್ಟಲ್ ಮೆಥಾಂಫೆಟಮೈನ್ ಪತ್ತೆಯಾಗಿದೆ. ಸದ್ಯ ಈ 2 ಮಾದಕ ವಸ್ತುವಿನ ಬೆಲೆ ಅಂದಾಜು 500 ಕೋಟಿ ರೂಪಾಯಿ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರಕ್ಕೆ ರೆಡ್ ಅಲರ್ಟ್: ಅಖಿಲೇಶ್ ಯಾದವ್
Advertisement
Advertisement
ಗುಪ್ತಚರ ಮಾಹಿತಿ ಆಧಾರದ ಮೇಲೆ ಅಸ್ಸಾಂ ಪೊಲೀಸರು ಮನೆಯೊಂದರ ಮೇಲೆ ದಾಳಿಮಾಡಿದ್ದಾರೆ. ಈ ವೇಳೆ 500 ಕೋಟಿ ಬೆಲೆ ಬಾಳುವ ಮಾದಕ ವಸ್ತು ಪತ್ತೆಯಾಗಿದೆ. ದಾಳಿ ವೇಳೆ 19 ವರ್ಷದ ಮೊಂಖೈನನ್ನು ಬಂಧಿಸಲಾಗಿದೆ ಎಂದು ಎಸ್‍ಪಿ ವಿಕ್ರಜಿತ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಖ್ಯಾತ ಫೋಟೋಗ್ರಾಫರ್ ತೆಗೆದಿರುವ ಸೂರ್ಯನ ಒಂದು ಫೋಟೋಗೆ 3766ರೂ.!