ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ತಮ್ಮ ದಾಖಲೆಗಳನ್ನು ಮುರಿದುಕೊಂಡು ನಿರಾತಂಕವಾಗಿ ಮುನ್ನುಗ್ಗುತ್ತಿದ್ದಾರೆ ರಾಜಮೌಳಿ. ಈ ಹಿಂದಿನ ಬಾಹುಬಲಿ ಚಿತ್ರಕ್ಕಿಂತಲೂ ಈ ಬಾರಿ ಕಲೆಕ್ಷನ್ ವೇಗ ಜೋರಾಗಿದೆಯಂತೆ. ಹಾಗಾಗಿ ರಿಲೀಸ್ ಆದ ಮೂರೇ ಮೂರು ದಿನಕ್ಕೆ 500 ಕೋಟಿ ಹಣ ಹರಿದು ಬಂದಿದೆ ಎನ್ನುತ್ತಾರೆ ಸಿನಿ ಲೆಕ್ಕಚಾರ ಪಂಡಿತರು. ಇದನ್ನೂ ಓದಿ : ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು
Advertisement
ವಿಶ್ವದಾದ್ಯಂತ ಈ ಸಿನಿಮಾ ರಿಲೀಸ್ ಆಗಿದ್ದು, ಕೇವಲ ಭಾರತದಲ್ಲಿ ಮಾತ್ರವಲ್ಲ, ವೀಕೆಂಡ್ ನಲ್ಲಿ ವಿದೇಶದಲ್ಲೂ ಸಖತ್ ಕಮಾಯಿ ಮಾಡಿದೆಯಂತೆ. ಇದೇ ವೇಗದಲ್ಲೇ ಒಂದು ವಾರ ಪ್ರದರ್ಶನ ಕಂಡರೆ, ಒಂದು ವಾರದಲ್ಲಿ ಸಾವಿರ ಕೋಟಿ ಹಣ ಗಳಿಸಿದ ಮೊದಲ ಚಿತ್ರ ಇದಾಗಲಿದೆ. ಇದನ್ನೂ ಓದಿ : ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ
Advertisement
Advertisement
ಈ ಸಿನಿಮಾ ಮೊದಲ ದಿನ ಕರ್ನಾಟಕದಲ್ಲಿ 14.5 ಕೋಟಿ ಗಳಿಕೆ ಮಾಡಿದ್ದರೆ, ಆಂಧ್ರ ಪ್ರದೇಶದಲ್ಲಿ 75 ಕೋಟಿ ಗಳಿಸಿತ್ತು. ತಮಿಳು ನಾಡಿನಲ್ಲಿ 10 ಕೋಟಿ, ಕೇರಳದಲ್ಲಿ 4 ಕೋಟಿ, ಹಿಂದಿಯಲ್ಲಿ 14 ಕೋಟಿ, ಉತ್ತರ ಭಾರತದಲ್ಲಿ 25 ಕೋಟಿ, ಹೀಗೆ ಭಾರತದಲ್ಲೇ ಮೊದಲ ದಿನ ಆರ್.ಆರ್.ಆರ್ ಗಳಿಸಿದ ಒಟ್ಟು ಮೊತ್ತ 156 ಕೋಟಿ ಆಗಿತ್ತು. ವಿದೇಶದಲ್ಲೂ ಕೂಡ ಹಿಂದೆ ಬಿದ್ದಿರಲಿಲ್ಲ. ಯುಎಸ್ ನಲ್ಲೇ 42 ಕೋಟಿ ಕಲೆಕ್ಷನ್ ಮಾಡಿತ್ತು. ಬೇರೆ ಬೇರೆ ದೇಶಗಳಿಂದ 25 ಕೋಟಿ ಬಂದಿತ್ತು. ವಿಶ್ವದಾದ್ಯಂತ ಮೊದಲ ದಿನದ ಒಟ್ಟು ಕಲೆಕ್ಷನ್ 223 ಕೋಟಿ ಆಗಿತ್ತು. ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು
Advertisement
ಹಿಂದಿ ವರ್ಷನ್ ಒಂದರಲ್ಲೇ ಶುಕ್ರವಾರ 19 ಕೋಟಿ, ಶನಿವಾರ 24 ಕೋಟಿ ಹಾಗೂ ಭಾನುವಾರ 31.50 ಕೋಟಿ ಏರಿಕೆ ಕಂಡಿದೆ. ಹೀಗಾಗಿ ಶನಿವಾರ ಮತ್ತು ಭಾನುವಾರ ಎರಡನೇ ದಿನದ ಗಳಿಕೆ ವೀಕೆಂಡ್ ಕಾರಣಕ್ಕಾಗಿ ಮತ್ತಷ್ಟು ಏರಿಕೆ ಕಂಡು ಮೂರೇ ದಿನದಲ್ಲಿ 500 ಕೋಟಿ ರೂಪಾಯಿಗಳನ್ನು ಈ ಸಿನಿಮಾ ಬಾಚಿದೆ.