ಬೆಂಗಳೂರು: ಮೆಟ್ರೋದಲ್ಲಿ (Namma Metro) ಪ್ರಯಾಣಿಸುವ ವೇಳೆ ಗೋಬಿ ಮಂಚೂರಿಯನ್ನು ಸೇವಿಸಿದ ವ್ಯಕ್ತಿಗೆ ಅಧಿಕಾರಿಗಳು 500 ರೂ. ದಂಡ ವಿಧಿಸಿದ್ದಾರೆ.
ವ್ಯಕ್ತಿ ಮೆಟ್ರೋ ಪ್ರಯಾಣದ ವೇಳೆ ಗೋಬಿ ಸೇವಿಸುತ್ತಿರುವುದನ್ನು ಸ್ನೇಹಿತರು ವೀಡಿಯೋ ಮಾಡಿದ್ದರು. ಈ ವೀಡಿಯೋ ವೈರಲ್ ಆಗಿದೆ. ಬಳಿಕ ಈ ವಿಚಾರ ಬಿಎಂಆರ್‌ಸಿಎಲ್ ಅಧಿಕಾರಿಗಳ ಗಮನಕ್ಕೆ ಬಂದಿದೆ. ನಿಯಮ ಉಲ್ಲಂಘಿಸಿದ್ದಕ್ಕಾಗಿ ಮೆಟ್ರೋ ನಿಗಮ ವ್ಯಕ್ತಿಯಿಂದ ದಂಡ ವಸೂಲಿ ಮಾಡಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಆಧುನಿಕ ಕಾಲದ ರಾವಣ – ಪೋಸ್ಟರ್ ರಿಲೀಸ್ ಮಾಡಿದ ಬಿಜೆಪಿ
ನಿಯಮ ಉಲ್ಲಂಘಿಸಿದ ವ್ಯಕ್ತಿಯನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ. ಆತ ಜಯನಗರದ (Jayanagar) ಪ್ರತಿಷ್ಠಿತ ಆಭರಣ ಮಳಿಗೆ ಒಂದರ ಉದ್ಯೋಗಿಯಾಗಿದ್ದಾನೆ. ಆತ ಪ್ರತಿದಿನ ಸಂಪಿಗೆ ರೋಡ್ ಮೆಟ್ರೋ ನಿಲ್ದಾಣದಿಂದ ಪ್ರಯಾಣ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ವೀಡಿಯೋ ಗಮನಕ್ಕೆ ಬಂದ ಬಳಿಕ ಎಂದಿನಂತೆ ನಿಲ್ದಾಣಕ್ಕೆ ಬಂದಾಗ ಆತನನ್ನು ಅಧಿಕಾರಿಗಳು ತಡೆದಿದ್ದಾರೆ. ಬಳಿಕ ದಂಡ ವಿಧಿಸಿ ಜಯನಗರ ಪೊಲೀಸ್ ಠಾಣೆಗೆ ಕರೆದೊಯ್ದು, ಮುಂದೆ ಈ ರೀತಿ ವರ್ತಿಸದಂತೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮುಕ್ತ ವಿವಿಯಲ್ಲಿ 250 ಕೋಟಿ ಅಕ್ರಮ – ಎಫ್‌ಐಆರ್ ದಾಖಲಿಸಿದ ಸಿಬಿಐ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]