ಬೆಂಗಳೂರು: ದೇಶದಲ್ಲಿ ಬಡವರ ತಲೆಯ ಮೇಲೆ ಸೂರಿಲ್ಲ ಎನ್ನುವುದು ದೇಶವ್ಯಾಪಿ ಸಮಸ್ಯೆಯಾಗಿದೆ. ಇದನ್ನು ಹೋಲಾಡಿಸುವ ಪ್ರಯತ್ನ ರಾಜ್ಯದಲ್ಲಿ ಆಗುತ್ತಿದ್ದು, ಬಡವರಿಗಾಗಿ 5 ಸಾವಿರ ಎಕರೆ ಸರ್ಕಾರಿ ಜಮೀನು ಮೀಸಲಿಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Advertisement
ಅವರಿಂದು ರಾಜರಾಜೇಶ್ವರಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ 1,588 ಮನೆಗಳ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ ವಿಧಾನಸೌಧ ವ್ಯಾಪ್ತಿಯಲ್ಲಿನ ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ ಬಳಿಕ ಮಾತನಾಡಿದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಲಾಲೂ ಪ್ರಸಾದ್ ಯಾದವ್ ಸ್ಪರ್ಧೆ
Advertisement
ನಮ್ಮ ಸರ್ಕಾರ ಈಗ 5 ಲಕ್ಷ ಮನೆ ಪೂರ್ಣಗೊಳಿಸುತ್ತಿದೆ. ಕಟ್ಟಿರುವ ಮನೆಗಳನ್ನು ಪೂರ್ಣಗೊಳಿಸುವ ಸಂಕಲ್ಪವನ್ನು ನಮ್ಮ ಸರ್ಕಾರ ಮಾಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡುತ್ತಿದ್ದ 1.75 ಲಕ್ಷ ಮೊತ್ತವನ್ನು 2 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಜಮೀನಿನ ಸಮಸ್ಯೆ ಬಗೆಹರಿಸಲು 5,000 ಎಕರೆ ಸರ್ಕಾರಿ ಜಮೀನು ಗುರುತಿಸಲಾಗಿದ್ದು, ಬಡವರಿಗಾಗಿ ಇದನ್ನು ಮೀಸಲಿಟ್ಟು, ಅಲ್ಲಿ ನಿವೇಶನ ಮತ್ತು ಮನೆ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಘೋಷಿಸಿದ್ದಾರೆ.
Advertisement
Advertisement
ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಬೃಹತ್ ಪ್ರಮಾಣದಲ್ಲಿ ತೆಗೆದುಕೊಂಡು ಮುಂದಿನ 5 ವರ್ಷಗಳಲ್ಲಿ ಎಲ್ಲರ ತಲೆಯ ಮೇಲೆ ಸೂರು ಇರಬೇಕೆನ್ನುವ ವಿಚಾರವನ್ನಿಟ್ಟುಕೊಂಡು ಕಾರ್ಯಕ್ರಮ ರೂಪಿಸಲಾಗಿದೆ. ಕರ್ನಾಟಕದಲ್ಲಿ ದೇವರಾಜ ಅರಸು ಅವರ ಕಾಲದಿಂದಲೂ ಮನೆಗಳ ನಿರ್ಮಾಣಕ್ಕೆ ವಿಶೇಷ ಪ್ರಯತ್ನಗಳಾಗಿವೆ. ಆದರೆ ಬೆಳೆಯುತ್ತಿರುವ ಜನಸಂಖ್ಯೆಯಿಂದಾಗಿ ಮನೆಗಳ ನಿರ್ಮಾಣ ದೊಡ್ಡ ಸವಾಲಾಗಿದೆ ಎಂದಿದ್ದಾರೆ.
1 ಲಕ್ಷ ಮನೆ ನಿರ್ಮಿಸುವ ಗುರಿ: ರಾಜ್ಯ ಸರ್ಕಾರ ಈಗಾಗಲೇ 52 ಸಾವಿರ ಮನೆಗಳನ್ನು ಪೂರ್ತಿಗೊಳಿಸಿದೆ. ಇನ್ನೂ 50 ಸಾವಿರ ಮನೆಗಳಿಗೆ ಇದೇ ವರ್ಷಕ್ಕೆ ಕಾರ್ಯಾದೇಶ ನೀಡಿದ್ದೇವೆ. ಅಲ್ಲದೆ ಫಲಾನುಭವಿಗಳಿಂದ ವಂತಿಗೆ ಬರುವುದು ತಡವಾಗುತ್ತಿದ್ದು, ಅವುಗಳನ್ನು ಪೂರ್ಣ ಮಾಡಲು ತಡವಾಗುತ್ತಿದೆ ಎಂಬುದನ್ನು ಸರ್ಕಾರ ಮನಗಂಡಿದ್ದು, ಅದಕ್ಕಾಗಿ ಬಡವರ ಪರವಾಗಿ ಬ್ಯಾಂಕುಗಳಿಗೆ ಸರ್ಕಾರ ಗ್ಯಾರಂಟಿ ನೀಡಿ 500 ಕೋಟಿ ರೂ.ಗಳನ್ನು ಸಾಲ ಪಡೆಯಲು ಮುಂದಾಗುತ್ತಿದೆ. ಇದರಿಂದ ಸಮಸ್ಯೆಗೂ ಪರಿಹಾರ ನೀಡಿದಂತಾಗುತ್ತದೆ. ಮನೆ ಪೂರ್ತಿಯಾದಾಗ ಕಂತಿನಲ್ಲಿ ನೀಡುವ ವ್ಯವಸ್ಥೆ ಮಾಡುತ್ತೇವೆ. ಬಡವರಿಗೆ ಸಹಾಯ ಮಾಡಲು ಎಲ್ಲೆಲ್ಲಿ ಸಾಧ್ಯವಿದೆಯೋ ಅದನ್ನು ಮಾಡುತ್ತಿದ್ದೇವೆ ಎಂದು ಭರವಸೆ ನೀಡಿದ್ದಾರೆ.