– 2 ಪ್ರಮುಖ ಯೋಜನೆಗಳ ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಫಾಕ್ಸ್‌ಕಾನ್ ಸಹಿ
ಚೆನ್ನೈ: ಕರ್ನಾಟಕದಲ್ಲಿ (Karnataka) 5,000 ಕೋಟಿ ರೂ. ಮೊತ್ತದ ಬಂಡವಾಳ ಹೂಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಫಾಕ್ಸ್‌ಕಾನ್ (Foxconn) ಸಹಿ ಮಾಡಿದೆ. ಈ ಯೋಜನೆಗಳಿಂದ 13,000 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ.
Advertisement
ಚೆನ್ನೈನ (Chennai) ಹೋಟೆಲ್ ಲೀಲಾ ಪ್ಯಾಲೇಸ್‌ನಲ್ಲಿ ಸೋಮವಾರ ನಡೆದ ಸಭೆಯಲ್ಲಿ ಫೋನ್ ಎನ್‌ಕ್ಲೋಸರ್ ಉತ್ಪಾದನಾ ಘಟಕ ಸ್ಥಾಪನೆ ಹಾಗೂ ಸೆಮಿಕಾನ್ ಉಪಕರಣಗಳ ಯೋಜನೆ ಜಾರಿ ಸಂಬಂಧ ಕರ್ನಾಟಕ ಸರ್ಕಾರದೊಂದಿಗೆ ಮಾತುಕತೆ ನಡೆಸಿದ ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು (Young Liu) ಉದ್ದೇಶಿತ ಹೂಡಿಕೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು. ಇದನ್ನೂ ಓದಿ: ಸೌಜನ್ಯಾ ಕೇಸ್ ಮರು ತನಿಖೆಯಾಗ್ಲಿ- ಧರ್ಮಸ್ಥಳದ ಗೌರವ, ಪ್ರತಿಷ್ಠೆಯನ್ನ ಹೇಗಾದ್ರೂ ಕಾಪಾಡ್ತೇವೆ: VHP
Advertisement
Advertisement
ಈ ವಿಷಯವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ (M.B.Patil) ಬುಧವಾರ ಅಧಿಕೃತವಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಚೆನ್ನೈನಲ್ಲಿ ತಮ್ಮ ಜೊತೆಗೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಮತ್ತು ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು. ಇದನ್ನೂ ಓದಿ: ಹೆಚ್ಚು ಸೂಟ್‍ಕೇಸ್ ತುಂಬಿಸಿ ಅಂತ ಟಾರ್ಗೆಟ್ ನೀಡುವ ದೆಹಲಿಯ ಕಾಂಗ್ರೆಸ್ ಸಭೆ: ಎನ್.ರವಿಕುಮಾರ್ ಟೀಕೆ
Advertisement
ಸಚಿವ ಎಂಬಿ ಪಾಟೀಲ್, ಈ ಎರಡೂ ಒಪ್ಪಂದಗಳು, ಈ ಮೊದಲು ಮಾಡಿಕೊಂಡಿದ್ದ 14 ಸಾವಿರ ಕೋಟಿ ರೂ. ಮೊತ್ತದ ಆ್ಯಪಲ್ ಫೋನ್ ತಯಾರಿಕಾ ಘಟಕ ಹೊರತಾದವು. ಇದಕ್ಕೂ ದೊಡ್ಡಬಳ್ಳಾಪುರ (Doddaballapura) ಸಮೀಪ ಭೂಮಿ ನೀಡುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಪ್ರದೀಪ್ ಈಶ್ವರ್ ಕನಸಲ್ಲೂ ನಾನು ಬರ್ತೀನಿ: ಸುಧಾಕರ್
ಫಾಕ್ಸ್‌ಕಾನ್ ಮತ್ತು ಕರ್ನಾಟಕ ಸರ್ಕಾರದ ನಡುವಿನ ಈ ಒಪ್ಪಂದವು ತಂತ್ರಜ್ಞಾನದ ಪ್ರಗತಿ ಮತ್ತು ರಾಜ್ಯದ ಒಟ್ಟಾರೆ ಸಾಮಾಜಿಕ, ಆರ್ಥಿಕ ಬೆಳವಣಿಗೆಯಲ್ಲಿ ಗಮನಾರ್ಹ ಬದಲಾವಣೆ ತರಲಿದೆ. ಮುಖ್ಯವಾಗಿ ಸಾವಿರಾರು ನುರಿತ ಕೆಲಸಗಾರರಿಗೆ ಉದ್ಯೋಗ ದೊರೆಯುತ್ತದೆ. ರಾಜ್ಯದಲ್ಲಿ ಬಂಡವಾಳ ಹೂಡಲಿರುವ ಫಾಕ್ಸ್‌ಕಾನ್ ಎಲ್ಲ ರೀತಿಯ ಬೆಂಬಲ ಒದಗಿಸಲು ನಮ್ಮ ಸರ್ಕಾರ ಬದ್ಧ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸ್ವಗ್ರಾಮ ಪೆರೇಸಂದ್ರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್‌ಗೆ ಮುಖಭಂಗ?
ತಂತ್ರಜ್ಞಾನ ಮತ್ತು ಆವಿಷ್ಕಾರ ವಲಯದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಫಾಕ್ಸ್‌ಕಾನ್ ಮುಂದೆ ಬಂದಿರುವುದು ಸಂತೋಷದ ವಿಷಯ. ಬಂಡವಾಳ ಆಕರ್ಷಣೆ ಮತ್ತು ಕಂಪನಿಗಳಿಗೆ ಉತ್ತಮ ಪರಿಸರ ವ್ಯವಸ್ಥೆ ಕಲ್ಪಿಸಲು ನಮ್ಮ ನೀತಿಗಳು ಪೂರಕವಾಗಿವೆ ಎಂದು ಹೇಳಿದರು. ಇದನ್ನೂ ಓದಿ: ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರೆಂಟಿ ಯೋಜನೆ ಅನ್ನೋ ಪ್ರಧಾನಿ ಹೇಳಿಕೆಗೆ ಸಿಎಂ ತಿರುಗೇಟು
ಕರ್ನಾಟಕ ಸರ್ಕಾರದ ಜತೆ ಯೋಜಿತ ಹೂಡಿಕೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ನಮ್ಮ ಹೈಟೆಕ್ ಉದ್ಯಮಗಳಿಗೆ ರಾಜ್ಯ ಆಕರ್ಷಕ ತಾಣವಾಗಿದೆ. ಉದ್ಯಮಕ್ಕೆ ಪೂರಕವಾದ ವಾತಾವರಣವಿದ್ದು, ನುರಿತ ಕೆಲಸಗಾರರ ಲಭ್ಯತೆ ಇಲ್ಲಿನ ವಿಶೇಷ. ಈ 2 ಪ್ರಮುಖ ಯೋಜನೆಗಳ ಮೂಲಕ ರಾಜ್ಯದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲಿದ್ದೇವೆ ಎಂದು ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು ಹೇಳಿದ್ದಾರೆ. ಇದನ್ನೂ ಓದಿ: ಅನಧಿಕೃತ ಫ್ಲೆಕ್ಸ್ ತೆಗೆಯಲು ಶುಭ ಘಳಿಗೆಗೆ ಕಾಯ್ತಿದ್ದೀರಾ? – ಬಿಬಿಎಂಪಿಗೆ ಹೈಕೋರ್ಟ್ ತರಾಟೆ
ಪ್ರಮುಖ ಯೋಜನೆಗಳ ವಿವರ:
1. ಫೋನ್ ಎನ್‌ಕ್ಲೋಸರ್ FII: ಐಫೋನ್‌ಗಳ ಮೆಕ್ಯಾನಿಕಲ್ ಎನ್‌ಕ್ಲೋಸರ್‌ನಂತಹ ಸ್ಮಾರ್ಟ್ಫೋನ್‌ನ ಉಪ ಘಟಕಗಳನ್ನು ತಯಾರಿಸುವ ಸಂಸ್ಥೆಯಾದ ಫಾಕ್ಸ್ ಕಾನ್ ಇಂಡಸ್ಟ್ರಿಯಲ್ ಇಂಟರ್ ನೆಟ್‌ನ (FII) ಹೂಡಿಕೆ ಮೊತ್ತ 350 ದಶಲಕ್ಷ ಡಾಲರ್ (3,000 ಕೋಟಿ ರೂ.) ಯೋಜನೆಯಡಿ 12,000 ಜನರಿಗೆ ಉದ್ಯೋಗ ದೊರೆಯಲಿದೆ. ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಘಟಕ ಸ್ಥಾಪಿಸಲು ಎಫ್‌ಐಐ ಉದ್ದೇಶಿಸಿದೆ.
2. ಸೆಮಿಕಾನ್ ಉಪಕರಣಗಳು: ಅಪ್ಲೈಡ್ ಮೆಟೀರಿಯಲ್ಸ್ ಸಹಯೋಗದಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಉಪಕರಣಗಳ ತಯಾರಿಸುವ ಸಂಸ್ಥೆಯ ಯೋಜಿತ ಯೋಜನೆಯ ಹೂಡಿಕೆ ಮೊತ್ತ 250 ದಶಲಕ್ಷ ಡಾಲರ್ (2,000 ಕೋಟಿ ರೂ.). ಇದರಿಂದ 1,000 ಜನರಿಗೆ ಉದ್ಯೋಗ ದೊರೆಯಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಹೈಟೆಕ್ ಏರೋಸ್ಪೇಸ್ ಮತ್ತು ಡಿಫೆನ್ಸ್ ಪಾರ್ಕ್ – 2ನೇ ಹಂತದಲ್ಲಿ ಈ ಯೋಜನೆಗಾಗಿ 35 ಎಕರೆ ಭೂಮಿಯನ್ನು ಅಂತಿಮಗೊಳಿಸಲಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಪರಿಸ್ಥಿತಿ ಕಠಿಣವಾಗಿದೆ, ತುರ್ತಾಗಿ ಮಧ್ಯಸ್ಥಿಕೆ ವಹಿಸಿ: ರಾಷ್ಟ್ರಪತಿಗೆ INDIA ಒಕ್ಕೂಟ ನಾಯಕರ ಮನವಿ
Web Stories