ನವದೆಹಲಿ: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 50,000 ರೂಪಾಯಿ ಪರಿಹಾರ ನೀಡಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(NDMA) ಶಿಫಾರಸು ಮಾಡಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಉತ್ತರ ನೀಡಿದೆ.
Advertisement
ಕೋವಿಡ್-19ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ನೀಡಲು ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಈ ಬಗ್ಗೆ ಸುಪ್ರೀಂಕೋರ್ಟ್‍ಗೆ ಉತ್ತರಿಸಿರುವ ಕೇಂದ್ರ ಸರ್ಕಾರ, ಕೊರೊನಾದಿಂದಾಗಿ ಮೃತಪಟ್ಟವರ ಸಂಬಂಧಿಕರಿಗೆ ಪರಿಹಾರ ನೀಡುವ ಕಾರ್ಯಕ್ಕೆ ಮುಂದಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಐಸಿಎಂಆರ್ ನೀಡಿರುವ ಮಾರ್ಗಸೂಚಿಗಳ ಪ್ರಕಾರ ಕೋವಿಡ್-19ನಿಂದ ಮೃತಪಟ್ಟಿದ್ದಾರೆ ಎಂದು ಪ್ರಮಾಣೀಕರಿಸಿದರೆ ಪರಿಹಾರ ನೀಡಲು ಸರ್ಕಾರ ಸಿದ್ಧಗೊಂಡಿದೆ. ಅದಲ್ಲದೆ ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ(ಎಸ್‍ಡಿಆರ್‍ಎಫ್)ನಿಂದ ರಾಜ್ಯ ಸರ್ಕಾರಗಳು ಪರಿಹಾರ ನೀಡಲು ಮುಂದಾಗಿದೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಕೋವಿಡ್‍ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರ ವಿಳಂಬ- ಕೇಂದ್ರಕ್ಕೆ ಸುಪ್ರೀಂ ತರಾಟೆ
Advertisement
Advertisement
ಪರಿಹಾರ ನೀಡುವ ಬಗ್ಗೆ ಸೆಪ್ಟೆಂಬರ್ 11ರೊಳಗೆ ಅಫಿಡವಿಟ್ ಸಲ್ಲಿಸಬೇಕೆಂದು ಕೇಂದ್ರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಅದಲ್ಲದೆ ನೀವು ಮಾರ್ಗಸೂಚಿ ರೂಪಿಸುವುದರೊಳಗೆ ಮೂರನೇ ಅಲೆ ಕೂಡ ಬಂದು ಹೋಗಬಹುದೇನೋ ಎಂಬ ಅನುಮಾನವನ್ನೂ ನ್ಯಾಯಪೀಠ ವ್ಯಕ್ತಪಡಿಸಿತ್ತು. ಇದೀಗ ಈ ಬಗ್ಗೆ ಕೇಂದ್ರ ಪರಿಹಾರ ನೀಡಲು ಒಪ್ಪಿಗೆ ಸೂಚಿಸಿದೆ. ಭಾರತದಲ್ಲಿ ಈಗಾಗಲೇ 3 ಕೋಟಿಗೂ ಅಧಿಕ ಮಂದಿಗೆ ಕೊರೊನಾ ಬಂದಿದ್ದು, 4 ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಡಿಕೆಶಿಗಾಗಿ ಒಕ್ಕಲಿಗ ಕಾಂಗ್ರೆಸ್ ನಾಯಕರ ಸಭೆ – ಶಿವಕುಮಾರ್ ಟ್ರೆಂಡ್ ಕ್ರಿಯೇಟ್‍ಗೆ ರಣತಂತ್ರ
Advertisement