– ಓರ್ವ ಮಹಿಳೆ ಸೇರಿ ಮೂವರ ಬಂಧನ
ಬೆಂಗಳೂರು: ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದಾಗ ಆರೋಪಿ ಸಿಕ್ಕಿಬಿದ್ದಿದ್ದು, ಈ ವೇಳೆ ಮೂರು ವರ್ಷಗಳ ಹಿಂದೆ ಮಾಡಿದ ಕೊಲೆ ಪ್ರಕಣವನ್ನು ಸಹ ಬಾಯ್ಬಿಟ್ಟಿದ್ದಾನೆ.
ಆರ್‍ಟಿ ನಗರ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದು, ಓರ್ವ ಮಹಿಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸುಹೇಲ್ ಖಾನ್, ಅಬ್ದುಲ್ ಬಸೀರ್, ಅನೀಸಾ ಫಾತಿಮಾ ಬಂಧಿತ ಆರೋಪಿಗಳು. ಬಂಧಿತರಿಂದ 502 ಕೆ.ಜಿ. ರಕ್ತಚಂದನ ಮರದ ತುಂಡುಗಳು ಹಾಗೂ ಒಂದು ಟಾಟ್ ಏಸ್ ವಾಹನ ಜಪ್ತಿ ಮಾಡಲಾಗಿದೆ.
ಆರ್‍ಟಿ ನಗರದಿಂದ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಈ ವೇಳೆ ವಿಚಾರಣೆಗೊಳಪಡಿಸಿದಾಗ ಮೂರು ವರ್ಷಗಳ ಹಿಂದಿನ ಕೊಲೆ ಪ್ರಕರಣವನ್ನು ಆರೋಪಿ ಬಾಯ್ಬಿಟ್ಟಿದ್ದಾನೆ.
ಬಂಧಿತ ಆರೋಪಿಗಳ ಫೈಕಿ ಸುಹೇಲ್ ಖಾನ್ ಈ ಹಿಂದೆ ಆರ್‍ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. 2017ರಲ್ಲಿ ನೂರ್ ಎಂಬಾತನನ್ನು ಕಿಡ್ನಾಪ್ ಮಾಡಿ ಗೌರಿಬಿದನೂರಿನ ಫಾರ್ಮ್ ಹೌಸ್ ನಲ್ಲಿ ಕೊಲೆ ಮಾಡಿದ್ದ. ಈ ಬಗ್ಗೆ ಆರ್‍ಟಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಉಳಿದ ಮೂವರು ಕೊಲೆ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದ್ದು, ಆರ್‍ಟಿ ನಗರ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ.