ಬುಡಕಟ್ಟು ಜನರ ಬದುಕು, ಒಕ್ಕಲೆಬ್ಬಿಸಿದ ನಂತರದ ಬವಣೆ, ಹೆಣ್ಣುಮಕ್ಕಳ ಮೇಲಾಗುವ ದೌರ್ಜನ್ಯದ ಸುತ್ತ ಬೆಳಕು ಚೆಲ್ಲುವ `ಕನ್ನೇರಿ’ ಸಿನಿಮಾ 50ನೇ ದಿನದ ಸಂಭ್ರಮದಲ್ಲಿದೆ.
ದೊಡ್ಡ ದೊಡ್ಡ ಸಿನಿಮಾಗಳ ಪೈಪೋಟಿ ನಡುವೆ ಪ್ರೇಕ್ಷಕರ ಪ್ರೀತಿಗೆ ಪಾತ್ರವಾದ `ಕನ್ನೇರಿ’ ಚಿತ್ರ ಮಾರ್ಚ್ 4ರಂದು ತೆರೆಕಂಡಿತ್ತು. ನೀನಾಸಂ ಮಂಜು ನಿರ್ದೇಶನ ಸಾರಥ್ಯದ 2ನೇ ಸಿನಿಮಾ ಇದಾಗಿದ್ದು, ಚಿತ್ರ 50 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ. ಇದನ್ನೂ ಓದಿ: ಪ್ರೆಗ್ನೆನ್ಸಿಯಲ್ಲೂ ಫಿಟ್‍ನೆಸ್ ಇರಬೇಕು ಎಂದು ವೀಡಿಯೋ ಮಾಡಿದ ನಟಿ ಪ್ರಣಿತಾ
Advertisement
Advertisement
ಮೊದಲಿನಿಂದಲೂ ಕನ್ನಡ ಸಿನಿಮಾಗಳ ಮೇಲೆ ವಿಶೇಷ ಪ್ರೀತಿ ಮೆರೆಯುತ್ತ ಬಂದಿರುವ ಉತ್ತರ ಕರ್ನಾಟಕದ ಜನತೆ ಕನ್ನೇರಿ ಸಿನಿಮಾ ನೋಡಿ ಮೆಚ್ಚಿ ಅಪ್ಪಿಕೊಂಡಿದ್ದಾರೆ. ಅದರಲ್ಲೂ ರಾಯಬಾಗದ ದತ್ತ ಚಿತ್ರಮಂದಿರದಲ್ಲಿ 50 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ. ಹಾಗಾಗಿ, ಇಡೀ ಚಿತ್ರತಂಡ ದತ್ತ ಚಿತ್ರಮಂದಿರದಲ್ಲೇ 50ನೇ ದಿನದ ಸಂಭ್ರಮವನ್ನು ಆಚರಿಸಿಕೊಂಡಿದೆ. ರಾಜ್ಯಾದ್ಯಂತ `ಕನ್ನೇರಿ’ ಸಿನಿಮಾ 10 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದು ಸದ್ಯದಲ್ಲೇ OTT ವೇದಿಕೆಗೂ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.
Advertisement
Advertisement
`ಕನ್ನೇರಿ’ ಅಪ್ಪಟ ಮಹಿಳಾ ಪ್ರಧಾನವಾದ ಸಿನಿಮಾ. ಕಾಡಿನಲ್ಲಿ ಬದುಕು ಕಟ್ಟಿಕೊಂಡಿರುವ ಜನರನ್ನು ಒಕ್ಕಲೆಬ್ಬಿಸಿದ ನಂತರದ ಬದುಕಿನ ಚಿತ್ರಣವನ್ನು ಅದರಲ್ಲೂ ಹೆಣ್ಣುಮಕ್ಕಳು ಯಾವ ರೀತಿ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ ಎಂಬುದನ್ನು ಸೂಕ್ಷ್ಮವಾಗಿ ಬಿತ್ತರಿಸಲಾಗಿದೆ. ನಗರ ಪ್ರದೇಶಕ್ಕೆ ಜೀವನ ಕಟ್ಟಿಕೊಳ್ಳಲು ಬಂದ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ಕೃತ್ಯಗಳ ಮೇಲೂ ಬೆಳಕು ಚೆಲ್ಲುವ ಕೆಲಸವನ್ನು ಈ ಚಿತ್ರ ಮಾಡಿದೆ. ಇದನ್ನೂ ಓದಿ: ತಮಿಳು ನಟ ಸಂತಾನಂ ಜೊತೆ ಹಾಟ್ ಹಾಟ್ ಆಗಿ ಕಾಣಿಸಿಕೊಳ್ತಾರಂತೆ ರಾಗಿಣಿ
ತಾರಾಗಣದಲ್ಲಿ ಅರ್ಚನಾ ಮಧುಸೂದನ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದು, ಅನಿತಾ ಭಟ್, ಕರಿ ಸುಬ್ಬು, ಅರುಣ್ ಸಾಗರ್, ಎಂ.ಕೆ.ಮಠ ಒಳಗೊಂಡ ಅನುಭವಿ ಕಲಾವಿದರ ಅಭಿನಯವಿದೆ. ಬುಡ್ಡಿದೀಪ ಸಿನಿಮಾ ಹೌಸ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಪಿ.ಪಿ. ಹೆಬ್ಬಾರ್ ಮತ್ತು ಚಂದ್ರಶೇಖರ್ ನಿರ್ಮಾಪಕರು. ಕೊಟಿಗಾನಹಳ್ಳಿ ರಾಮಯ್ಯ ಕಥೆ ಮತ್ತು ಸಾಹಿತ್ಯ, ಸುಜಿತ್ ಎಸ್ ನಾಯಕ್ ಸಂಕಲನ, ಗಣೇಶ್ ಹೆಗ್ಡೆ ಕ್ಯಾಮೆರಾ ನಿರ್ದೇಶನ ಚಿತ್ರಕ್ಕಿದೆ.