ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಶನಿವಾರ ಇಲ್ಲಿನ ಕಲಬುರಗಿ ಹೈಕೋರ್ಟ್ (Kalaburagi Highcourt) ಪೀಠದಲ್ಲಿ ಜರುಗಿದ ಲೋಕ ಅದಾಲತ್‌ನಲ್ಲಿ (Lok Adalat) ಪರಸ್ಪರ ರಾಜಿ ಸಂಧಾನದ ಮೂಲಕ 520 ಪ್ರಕರಣ ವಿಲೇವಾರಿ ಮಾಡಿ 14,00,71,305 ರೂ. ಪರಿಹಾರ ವಿತರಣೆಗೆ ಜನತಾ ನ್ಯಾಯಾಲಯ ಆದೇಶಿಸಿದೆ.
ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು ವಾಹನ ವಿಮೆ ಮತ್ತು ಸಿವಿಲ್ ಪ್ರಕರಣಗಳನ್ನು ಅರ್ಜಿದಾರ, ಪ್ರತಿವಾದಗಳು ಹಾಗೂ ವಕೀಲರ ಸಮಕ್ಷಮ ರಾಜಿ-ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಲಾಯಿತು. ಇದನ್ನೂ ಓದಿ: ಇನ್ನು ಮುಂದೆ ಕ್ರೆಡಿಟ್ ಕಾರ್ಡ್‌ನಂತೆ ಯುಪಿಐ ಬಳಸಬಹುದು – ಇದು ಹೇಗೆ ಕೆಲಸ ಮಾಡುತ್ತೆ?
ಲೋಕ ಅದಾಲತ್‌ನಲ್ಲಿ ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ.ಅಶೋಕ್ ಎಸ್ ಕಿಣಗಿ, ನ್ಯಾ.ಉಮೇಶ್ ಎಂ ಅಡಿಗ ಹಾಗೂ ನ್ಯಾ.ರಾಜೇಶ್ ರೈಕೆ ಅವರು ಭಾಗವಹಿಸಿದ್ದರು. ಇದನ್ನೂ ಓದಿ: Assembly Bypolls: 13 ಕ್ಷೇತ್ರಗಳ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟ ಜಯಭೇರಿ – 2ರಲ್ಲಿ ಬಿಜೆಪಿ ಗೆಲುವು!
ಉಚ್ಚನ್ಯಾಯಾಲಯದ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ದಯಾನಂದ ವಿ.ಹಿರೇಮಠ, ಅಪರ ಮಹಾ ವಿಲೇಖನಾಧಿಕಾರಿ ಬಸವರಾಜ ಚೇಂಗಟಿ ಸೇರಿದಂತೆ ನ್ಯಾಯಾವಾದಿಗಳು, ಕಕ್ಷಿದಾರರು ಭಾಗವಹಿಸಿದ್ದರು. ಇದನ್ನೂ ಓದಿ: ರಾಮನಗರ ಅನ್ನೋದಕ್ಕಿಂತ ಬೇರೊಂದು ಒಳ್ಳೆಯ ಪದ ಸಿಗಲ್ಲ: ಡಾ.ಮಂಜುನಾಥ್