521 ಪಾಸಿಟಿವ್, ಬೆಂಗಳೂರಿನಲ್ಲಿ 312 ಕೇಸ್ ಪತ್ತೆ – 4 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

Public TV
1 Min Read
Corona 6

ಬೆಂಗಳೂರು: ಇಂದು ಕರ್ನಾಟಕದಲ್ಲಿ 521 ಮಂದಿಗೆ ಕೊರೊನಾ ಬಂದಿದ್ದು, ಬೆಂಗಳೂರಿನಲ್ಲಿ 312 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ. ಆಸ್ಪತ್ರೆಯಿಂದ 350 ಜನ ಡಿಸ್ಚಾರ್ಜ್ ಆಗಿದ್ದಾರೆ. 5 ಜನ ಕೊರೊನಾಗೆ ಬಲಿಯಾಗಿದ್ದಾರೆ.

a639b372 71b4 484a a56f 4d50c0698363

ಇಂದು ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಮನಗರದಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,51,251ಕ್ಕೆ ಏರಿಕೆ ಆಗಿದೆ. ಈ ಪೈಕಿ 9,33,097 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 5,804 ಸಕ್ರಿಯ ಪ್ರಕರಣಗಳಿವೆ.

3ed33287 69b7 4764 98f8 e71a699db505

ಒಟ್ಟು ಇಲ್ಲಿಯವರೆಗೆ 12,331 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 121 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 3,763 ಆಂಟಿಜನ್ ಟೆಸ್ಟ್, 80,251 ಆರ್‍ಟಿ ಪಿಸಿಆರ್ ಸೇರಿದಂತೆ ಒಟ್ಟು 84,014 ಮಂದಿಗೆ ಪರೀಕ್ಷೆ ಮಾಡಲಾಗಿದೆ.

07928a81 352d 4d1c 8b20 c7ff5215f7a9

ಬೆಂಗಳೂರು ನಗರದಲ್ಲಿ 312 ಮಂದಿಗೆ ಸೋಂಕು ಬಂದಿದೆ. ದಕ್ಷಿಣ ಕನ್ನಡ 24, ಕಲಬುರುಗಿ 20, ಉಡುಪಿ 16, ತುಮಕೂರು 15, ಬೆಳಗಾವಿಯ 14 ಮಂದಿಗೆ ಸೋಂಕು ಬಂದಿದೆ. ಒಟ್ಟು 121 ಮಂದಿ ಐಸಿಯುನಲ್ಲಿದ್ದು, ಬೆಂಗಳೂರಿನಲ್ಲಿ 53, ಕಲಬುರಗಿ 9, ಬೀದರ್, ತುಮಕೂರು 5, ಮತ್ತು ಉಡುಪಿ, ಹಾಸನದಲ್ಲಿ 4 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *