ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗಿದ್ದು, ಶೇ.0.39ಕ್ಕೆ ಇಳಿಕೆಯಾಗಿದೆ. ಇಂದು 523 ಹೊಸ ಕೊರೊನಾ ಕೇಸ್ ಪತ್ತೆಯಾಗಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ.
ಇಂದು 621 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 11,819 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ರೇಟ್ ಶೇ.0.39ರಷ್ಟಿದೆ. ಮರಣ ಪ್ರಮಾಣ ಶೇ.1.72ರಷ್ಟಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 29,79,331 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು 29,29,629 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಶಾರುಖ್ ಖಾನ್ ಪುತ್ರನ ಬಂಧನ- ರಮ್ಯಾಗೆ ಅನುಮಾನ
ರಾಜ್ಯದಲ್ಲಿ ಇಂದು 66,452 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,31,898 ಸ್ಯಾಂಪಲ್ (ಆರ್ಟಿ ಪಿಸಿಆರ್ 1,04,978 + 26,920 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ದಿನದ ಕೊರೊನಾ ಪ್ರಕರಣಗಳ ಸಂಖ್ಯೆ ಒಂದಂಕಿಗೆ ಕುಸಿದಿದೆ. ಬೆಂಗಳೂರಿನಲ್ಲಿ ಇಂದು 205 ಜನಕ್ಕೆ ಕೊರೊನಾ ಸೋಂಕು ತಗುಲಿದ್ದು, 2 ಜನ ಮರಣ ಹೊಂದಿದ್ದಾರೆ. 230 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 6, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 9, ಬೆಂಗಳೂರು ನಗರ 205, ಬೀದರ್ 2, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 7, ಚಿತ್ರದುರ್ಗ 6, ದಕ್ಷಿಣ ಕನ್ನಡ 43, ದಾವಣಗೆರೆ 3, ಧಾರವಾಡ 4, ಗದಗ 2, ಹಾಸನ 50, ಹಾವೇರಿ 0, ಕಲಬುರಗಿ 0, ಕೊಡಗು 11, ಕೋಲಾರ 3, ಕೊಪ್ಪಳ 1, ಮಂಡ್ಯ 18, ಮೈಸೂರು 62, ರಾಯಚೂರು 1, ರಾಮನಗರ 4, ಶಿವಮೊಗ್ಗ 21, ತುಮಕೂರು 28, ಉಡುಪಿ 16, ಉತ್ತರ ಕನ್ನಡ 13, ವಿಜಯಪುರ ಮತ್ತು ಯಾದಗಿರಿಯಲ್ಲಿ ಕೊರೊನಾ ಪ್ರಕರಣ ದಾಖಲಾಗಿಲ್ಲ.