ಬೆಂಗಳೂರು: ರಾಜ್ಯದಲ್ಲಿ ಇಂದು 523 ಹೊಸ ಕೊರೊನಾ ಕೇಸ್ ಪತ್ತೆಯಾಗಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ. 575 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟು 11,926 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ರೇಟ್ ಶೇ.0.59ರಷ್ಟಿದೆ. ಮರಣ ಪ್ರಮಾಣ ಶೇ.2.67ರಷ್ಟಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 29,78,808 ಮಂದಿಗೆ ಕೊರೊನಾ ಸೋಮಕು ತಗುಲಿದೆ. ಒಟ್ಟು 29,29,008 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯತೆಯ ಚಿಂತನೆಯನ್ನು ಬೆಳೆಸಿಕೊಂಡರೆ ಎಚ್ಡಿಕೆಗೆ ಹೊಟ್ಟೆ ಉರಿ ಯಾಕೆ: ಸೂಲಿಬೆಲೆ ಪ್ರಶ್ನೆ
ಇಂದು ರಾಜ್ಯದಲ್ಲಿ 1,86,264 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 87,303 ಸ್ಯಾಂಪಲ್ (ಆರ್ಟಿ ಪಿಸಿಆರ್ 59,328 + 27,975 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಸೋಂಕಿನ ಪ್ರಕರಣಗಳ ಸಂಖ್ಯೆ ನೂರಕ್ಕಿಂತ ಕಡಿಮೆ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು 201 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 4 ಜನ ಮರಣ ಹೊಂದಿದ್ದಾರೆ. 238 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಡಿಕೆಶಿ ಸಾಕ್ಷ್ಯ ವೇಳೆ ಸುಳ್ಯ ಕೋರ್ಟಲ್ಲಿ ಕೈ ಕೊಟ್ಟ ಕರೆಂಟ್!
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 7, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 201, ಬೀದರ್ 0, ಚಾಮರಾಜನಗರ 3, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 48, ಚಿತ್ರದುರ್ಗ 9, ದಕ್ಷಿಣ ಕನ್ನಡ 55, ದಾವಣಗೆರೆ 2, ಧಾರವಾಡ 5, ಗದಗ 0, ಹಾಸನ 23, ಹಾವೇರಿ 0, ಕಲಬುರಗಿ 1, ಕೊಡಗು 7, ಕೋಲಾರ 5, ಕೊಪ್ಪಳ 0, ಮಂಡ್ಯ 11, ಮೈಸೂರು 33, ರಾಯಚೂರು 1, ರಾಮನಗರ 5, ಶಿವಮೊಗ್ಗ 5, ತುಮಕೂರು 37, ಉಡುಪಿ 19, ಉತ್ತರ ಕನ್ನಡ 26 ವಿಜಯಪುರ 2 ಮತ್ತು ಯಾದಗಿರಿಯಲ್ಲಿ ಕೊರೊನಾ ಪ್ರಕರಣ ದಾಖಲಾಗಿಲ್ಲ.