ರಾಮನಗರ: ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಸಮೀಪ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ರಕ್ತಚಂದನ(Red Sandalwood) ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ರಕ್ತಚಂದನದ ತುಂಡುಗಳನ್ನು ತುಂಬಿಕೊಂಡು ಸಾಗಣಿಕೆ ಮಾಡುತ್ತಿದ್ದ ವಾಹನವನ್ನು ಅನುಮಾನದ ಮೇಲೆ ನಿಲ್ಲಿಸಿದ ಬೆಂಗಳೂರು ಅರಣ್ಯ ಸಂಚಾರಿ ದಳದ ಸಿಬ್ಬಂದಿ ತಪಾಸಣೆ ಮಾಡಿದರು. ಈ ವೇಳೆ 13 ರಕ್ತಚಂದನದ ತುಂಡುಗಳು ಪತ್ತೆಯಾಗಿವೆ. ಇದನ್ನೂ ಓದಿ: ‘ಕಾಂತಾರ’ ನೋಡಲು ಕಾಯುತ್ತಿದ್ದೇನೆ, ಕುತೂಹಲ ಹೆಚ್ಚಾಗಿದೆ: ಕಂಗನಾ ರಣಾವತ್
Advertisement
Advertisement
ಸ್ಥಳದಲ್ಲೇ ನಾಲ್ವರನ್ನು ಬಂಧಿಸಿದ ಅರಣ್ಯಾಧಿಕಾರಿಗಳು ಗೂಡ್ಸ್ ವಾಹನ ಹಾಗೂ 527 ಕೆ.ಜಿ. ರಕ್ತಚಂದನದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಇನ್ನೂ ಕೆಲ ವ್ಯಕ್ತಿಗಳು ಶಾಮೀಲಾಗಿರುವ ಶಂಕೆ ಇದ್ದು ಬಂಧನಕ್ಕೆ ಬಲೆ ಬೀಸಿದ್ದಾರೆ.
Advertisement
ಮಾರುಕಟ್ಟೆಯಲ್ಲಿ ಒಳ್ಳೆಯ ಬೆಲೆ ಇರುವ ಕಾರಣ ರಕ್ತಚಂದನವನ್ನ ಕಳ್ಳಸಾಗಣೆ ಮಾಡುತ್ತಿದ್ದರು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.