ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 5,339 ಕೇಸ್ ದಾಖಲಾಗಿದೆ. ಜಿಲ್ಲೆಗಳ ಪೈಕಿ ಯಾದಗಿರಿ ಒಂದರಲ್ಲಿ ಮಾತ್ರ ಕೇವಲ 6 ಪಾಸಿಟಿವ್ ಕೇಸ್ ವರದಿಯಾಗಿದ್ದು, ಉಳಿದೆಲ್ಲಾ ಜಿಲ್ಲೆಗಳಲ್ಲಿ 20ಕ್ಕಿಂತ ಹೆಚ್ಚು ಕೇಸ್ ದಾಖಲಾಗಿದೆ.
Advertisement
ರಾಜ್ಯದಲ್ಲಿ ಇಂದು ಒಟ್ಟು 48 ಮರಣ ಪ್ರಕರಣ ದಾಖಲಾಗಿದೆ. ಪಾಸಿಟಿವಿಟಿ ರೇಟ್ 4.14%ಕ್ಕೆ ಇಳಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 60,956 ರಷ್ಟಿದೆ. ಬೆಂಗಳೂರಿನಲ್ಲಿ ಒಟ್ಟು 2,161 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 16 ಮರಣ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಾನು ಭಯ ಯಾಕೆ ಪಡಬೇಕು, ಧರ್ಮ ಪಾಲನೆ ಮಾಡಿದ್ದೇನೆ: ಮಂಡ್ಯ ವಿದ್ಯಾರ್ಥಿನಿ
Advertisement
Advertisement
ರಾಜ್ಯದಲ್ಲಿ ಒಟ್ಟು 16,749 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,12,100 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,11,615 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.89% ರಷ್ಟಿದೆ. ರಾಜ್ಯದಲ್ಲಿ ಇಂದು ಒಟ್ಟು 1,40,486 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,28,705 ಸ್ಯಾಂಪಲ್ (ಆರ್ಟಿಪಿಸಿಆರ್ 98,874 + 29,831 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಶಿಕ್ಷಣ ಸಂಸ್ಥೆಗಳಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗೆ ನಿಷೇಧ: ಕಮಲ್ ಪಂತ್
Advertisement
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 67, ಬಳ್ಳಾರಿ 173, ಬೆಳಗಾವಿ 327, ಬೆಂಗಳೂರು ಗ್ರಾಮಾಂತರ 69, ಬೆಂಗಳೂರು ನಗರ 2,161, ಬೀದರ್ 28, ಚಾಮರಾಜನಗರ 111, ಚಿಕ್ಕಬಳ್ಳಾಪುರ 70, ಚಿಕ್ಕಮಗಳೂರು 53, ಚಿತ್ರದುರ್ಗ 136, ದಕ್ಷಿಣ ಕನ್ನಡ 103, ದಾವಣಗೆರೆ 28, ಧಾರವಾಡ 132, ಗದಗ 31, ಹಾಸನ 139, ಹಾವೇರಿ 55, ಕಲಬುರಗಿ 111, ಕೊಡಗು 119, ಕೋಲಾರ 50, ಕೊಪ್ಪಳ 25, ಮಂಡ್ಯ 158, ಮೈಸೂರು 293, ರಾಯಚೂರು 75, ರಾಮನಗರ 32, ಶಿವಮೊಗ್ಗ 185, ತುಮಕೂರು 342, ಉಡುಪಿ 97, ಉತ್ತರ ಕನ್ನಡ 60, ವಿಜಯಪುರ 103 ಮತ್ತು ಯಾದಗಿರಿಯಲ್ಲಿ 6 ಪಾಸಿಟಿವ್ ಪ್ರಕರಣ ದಾಖಲಾಗಿದೆ.