ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 54 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ನಿನ್ನೆಗಿಂತ ಇಂದು 9 ಪ್ರಕರಣಗಳು ಹೆಚ್ಚಾಗಿವೆ.
ಬೆಂಗಳೂರು ನಗರದಲ್ಲಿ ಇಂದು 49 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ. ಇಂದು ಕೂಡಾ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ಶೂನ್ಯವಾಗಿದ್ದು, ಮರಣ ಪ್ರಮಾಣ ಶೇ.0.00 ಮುಂದುವರಿದಿದೆ. ಪಾಸಿಟಿವಿಟಿ ರೇಟ್ ಶೇ.0.63 ಇದ್ದು, ಇಂದು 31 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Advertisement
Advertisement
ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,464 ಇದ್ದು, ಇಲ್ಲಿಯವರೆಗೆ 40,057 ಮರಣ ಪ್ರಕರಣಗಳು ವರದಿಯಾಗಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ 6,57,55,907 ಮಂದಿಗೆ ಕೊರೊನಾ ಬಂದಿದ್ದು, ಒಟ್ಟು 39,04,806 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದನ್ನೂ ಓದಿ: ಬಾಲಿವುಡ್ 3ನೇ ದಿನದ ಕಲೆಕ್ಷನ್‌ನಲ್ಲೂ ಹವಾ ಕ್ರಿಯೇಟ್ ಮಾಡಿದ ʻಕೆಜಿಎಫ್ 2ʼ
Advertisement
Advertisement
ರಾಜ್ಯದಲ್ಲಿ ಇಂದು ಒಟ್ಟು 5,341 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಒಟ್ಟು 7,188 ಸ್ಯಾಂಪಲ್(ಆರ್‌ಟಿಪಿಸಿಆರ್ 5,194+1994 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಸಿಡಿಎಸ್ ಹುದ್ದೆಗೆ ಕಾರ್ಯನಿರತ, ನಿವೃತ್ತ ಎರಡೂ ಅಧಿಕಾರಿಗಳ ಪರಿಗಣನೆ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 49, ದಕ್ಷಿಣಕನ್ನಡ 1, ಧಾರವಾಡ 2, ಮೈಸೂರು 1 ಹಾಗೂ ರಾಯಚೂರಿನಲ್ಲಿ 1 ಕೋವಿಡ್ ಪ್ರಕರಣಗಳು ದಾಖಲಾಗಿವೆ. ಉಳಿದ 25 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ದಾಖಲಾಗಿದೆ.