ಹೈದರಾಬಾದ್: ಹೋಟೆಲ್ ಮಾಲೀಕನೊಬ್ಬ 5 ರೂಪಾಯಿಗೆ ಗ್ರಾಹಕನ ಜೊತೆಗೆ ಗಲಾಟೆ ಮಾಡಿ 55 ಸಾವಿರ ರೂಪಾಯಿ ಕಳೆದುಕೊಂಡಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಗ್ರಾಹಕ ನ್ಯಾಯಾಲಯ, ಹೈದರಾಬಾದ್‍ನ ತಿಲಕ್ ನಗರದ ಹೋಟೆಲ್‍ಗೆ ದಂಡ ವಿಧಿಸಿದೆ.
Advertisement
ಒಸ್ಮಾನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿರುವ ವಂಶಿ ತನ್ನ ಸ್ನೇಹಿತರ ಜೊತೆಗೆ ಬಿರಿಯಾನಿ ಹೌಸ್‍ವೊಂದಕ್ಕೆ ಹೋಗಿದ್ದರು. ಊಟ ಮಾಡಿದ ಬಳಿಕ ಜಿಎಸ್‍ಟಿ ಎಲ್ಲಾ ಸೇರಿ 1,127 ರೂಪಾಯಿ ಬಿಲ್ ಆಗಿದೆ. ನೀರಿನ ಬಾಟಲ್‍ಗೆ ಹೆಚ್ಚುವರಿಯಾಗಿ 5 ರೂಪಾಯಿ ಬಿಲ್ ಮಾಡಿದ ವಿಚಾರ ತಿಳಿದ ವಂಶಿ ಹೋಟೆಲ್ ಮಾಲೀಕರಿಗೆ ಪ್ರಶ್ನೆ ಮಾಡಿದ್ದಾಳೆ. ಆಗ ದೊಡ್ಡ ಜಗಳವೇ ಆಗಿದೆ.
Advertisement
Advertisement
ನಂತರ ವಂಶಿ, ಹೋಟೆಲ್ ಮ್ಯಾನೇಜ್‍ಮೆಂಟ್ ವಿರುದ್ಧ ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ನೀರಿನ ಬಾಟಲ್‍ಗೆ ಹೆಚ್ಚುವರಿಯಾಗಿ 5.50 ರೂಪಾಯಿ ವಿಧಿಸಿದ್ದಲ್ಲದೆ, ಎಲ್ಲರೆದುರು ಅವಮಾನಿಸಿದ್ದಾರೆ ಎಂದು ದೂರು ನೀಡಿದ್ದಾರೆ. ಇದನ್ನೂ ಓದಿ: ಆಂಬ್ಯುಲೆನ್ಸ್ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ!
Advertisement
ಇದಾದ ಬಳಿಕ ಜಿಲ್ಲಾ ಗ್ರಾಹಕ ಆಯೋಗದ 2ನೇ ಪೀಠದ ಮುಖ್ಯಸ್ಥ ವಕ್ಕಂತಿ ನರಸಿಂಹ ಅವರು ಈ ಪ್ರಕರಣದ ವಿಚಾರಣೆ ನಡೆಸಿದರು. ಹೋಟೆಲ್ ಸಿಬ್ಬಂದಿ ಅಶ್ಲೀಲ ಪದ ಬಳಸಿ ನಿಂದಿಸಿ, ಗ್ರಾಹಕರಿಗೆ ಸೇವೆ ನೀಡುವಲ್ಲಿ ವಿಫಲವಾಗಿರುವುದು ಮತ್ತು ಹೆಚ್ಚುವರಿ 5.50 ರೂಪಾಯಿ ಬಿಲ್ ಮಾಡಿರುವುದು ಸಾಬೀತಾಗಿದೆ. ಇದನ್ನೂ ಓದಿ: ಬಿಎಸ್ ಯಡಿಯೂರಪ್ಪಗೆ ಗುರುಬಸವಶ್ರೀ ಪ್ರಶಸ್ತಿ ಪ್ರದಾನ
ಹೆಚ್ಚುವರಿ 5.50 ರೂಪಾಯಿಗೆ ಶೇ.10 ರಷ್ಟು ಬಡ್ಡಿ ಸೇರಿಸಿ 5000 ರೂಪಾಯಿಯನ್ನು ಗ್ರಾಹಕ ವಂಶಿಗೆ ನೀಡಬೇಕು. ಜಿಲ್ಲಾ ಗ್ರಾಹಕ ರಕ್ಷಣಾ ಮಂಡಳಿಯ ಕಲ್ಯಾಣಕ್ಕಾಗಿ ಜಿಲ್ಲಾಧಿಕಾರಿ ಕಚೇರಿಗೆ 50 ಸಾವಿರ ರೂಪಾಯಿ ದಂಡವನ್ನು 45 ದಿನದ ಒಳಗೆ ಕಟ್ಟಬೇಕು. ಮತ್ತೊಮ್ಮೆ ಈ ತಪ್ಪು ಮಾಡದಂತೆ ನ್ಯಾಯಾಲಯ ಆದೇಶಿದೆ.