ಶಿವಮೊಗ್ಗ: ಹಿಜಬ್‍ಗೆ ಅವಕಾಶ ನೀಡುವಂತೆ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದ 58 ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ನಡೆದಿದೆ.
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಿಜಬ್‍ಗೆ ಅವಕಾಶ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸದೇ ತರಗತಿಗೆ ಹಾಜರಾಗುವಂತೆ ಮನವಿ ಮಾಡಿದ್ದರು. ಆದರೆ ಶಿಕ್ಷಕರ ಮಾತು ಧಿಕ್ಕರಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಶಾಲಾ ಮಂಡಳಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ. ಅಮಾನತು ನಿರ್ಧಾರ ಪ್ರಕಟಿಸುತ್ತಿರುವ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸಿ – ಅಂಜುಮನ್ ಸಂಸ್ಥೆಯಿಂದ ಮನವಿ
ಈ ಬಗ್ಗೆ ಶಾಲೆಯ ಪ್ರಾಂಶುಪಾಲರ ವಿಚಾರಿಸಿದರೆ ನಾವು ಯಾವುದೇ ವಿದ್ಯಾರ್ಥಿಗಳನ್ನು ಅಮಾನತು ಮಾಡಿಲ್ಲ. ವಿದ್ಯಾರ್ಥಿಗಳಿಗೆ ಹೆದರಿಸಲು ಈ ರೀತಿ ಹೇಳಿದ್ದೇವು ಅಷ್ಟೇ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಲಪಾಡ್ ವಿರುದ್ಧ ಎಫ್‍ಐಆರ್ ದಾಖಲು