ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಗಳ ಸಂಖ್ಯೆಯಲ್ಲಿ ನಿಧಾನವಾಗಿ ಇಳಿಕೆಯಾಗುತ್ತಾ ಇದೆ. ಇಂದು 589 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಹಾಗೆಯೇ 13 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇನ್ನು ಪಾಸಿಟಿವಿಟಿ ರೇಟ್ ಶೇ.0.46ಕ್ಕೆ ಇಳಿಕೆಯಾಗಿದೆ.
ಇಂದು ಬೆಂಗಳೂರಿನಲ್ಲಿ ಇಂದು 221 ಕೇಸ್ ದಾಖಲಾಗಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ 05 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 887 ಮಂದಿ ಡಿಸ್ಚಾರ್ಜ್ ಆಗಿದ್ದು, ಬೆಂಗಳೂರಿನಲ್ಲಿ 212 ಜನ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದನ್ನೂ ಓದಿ: ಮತ್ತೆ ಹಳೆಯ ವಿಜಯಲಕ್ಷ್ಮಿಯಾಗಿ ತೆರೆ ಮೇಲೆ ಬರ್ತೇನೆ: ನಾಗಮಂಡಲ ನಟಿ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 8, ಬೆಂಗಳೂರು ಗ್ರಾಮಾಂತರ 20, ಬೆಂಗಳೂರು ನಗರ 221, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 25, ಚಿತ್ರದುರ್ಗ 3, ದಕ್ಷಿಣ ಕನ್ನಡ 86, ದಾವಣಗೆರೆ 7, ಧಾರವಾಡ 4, ಗದಗ 0, ಹಾಸನ 39, ಹಾವೇರಿ 3, ಕಲಬುರಗಿ 0, ಕೊಡಗು 34, ಕೋಲಾರ 8, ಕೊಪ್ಪಳ 1, ಮಂಡ್ಯ 6, ಮೈಸೂರು 37, ರಾಯಚೂರು 0, ರಾಮನಗರ 2, ಶಿವಮೊಗ್ಗ 15, ತುಮಕೂರು 21, ಉಡುಪಿ 23, ಉತ್ತರ ಕನ್ನಡ 15, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
ಇಂದಿನ 01/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/tOfwhTllBB @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/R3ufEcdu5w
— K'taka Health Dept (@DHFWKA) October 1, 2021