ಬೆಂಗಳೂರು: ಉಡುಪಿ, ಬೆಂಗಳೂರು (Bengluru), ಶಿವಮೊಗ್ಗ, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳ 59 ಪೊಲೀಸ್ ಇನ್ಸ್‌ಪೆಕ್ಟರ್ (ಸಿವಿಲ್) ಗಳನ್ನ (Police Inspector Transfer) ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Advertisement
ಹೈಕೋರ್ಟ್ ಭದ್ರತೆಗೆ ನಿಯೋಜನೆಗೊಂಡಿದ್ದ ಟಿ.ಎಂ ಧರ್ಮೇಂದ್ರ ಅವರನ್ನು ಬೆಂಗಳೂರು ವಿವಿ ಪುರಂ ಪೊಲೀಸ್ ಠಾಣೆಗೆ, ಕರ್ನಾಟಕ ಲೋಕಾಯುಕ್ತ ಅಧಿಕಾರಿಯಾಗಿದ್ದ ಎಸ್. ಮಹದೇವಯ್ಯ ಅವರನ್ನು ಬೆಂಗಳೂರು ನಗರ ಸಿಸಿಬಿ ವಿಭಾಗಕ್ಕೆ, ಸಿಐಡಿ ಅಧಿಕಾರಿಯಾಗಿದ್ದ ಮಹೇಶ್ ಕನಕಗಿರಿ ಅವರನ್ನು ಬೆಂಗಳೂರು ನಗರ ಬಂಡೇಪಾಳ್ಯ ಪೊಲೀಸ್ ಠಾಣೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ. ಇದನ್ನೂ ಓದಿ: ಅ. 10ರೊಳಗೆ 40 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಿ- ಕೆನಡಾಗೆ ಭಾರತ ಗಡುವು
Advertisement
Advertisement
ಶಿವಮೊಗ್ಗ ಸಾಗರ ಗ್ರಾಮಾಂತರ ವೃತ್ತದ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ವಿ ಕೃಷ್ಣಪ್ಪ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ನಗರದ ಶೇಷಾದ್ರಿಪುರಂ (ಹೈಗ್ರೌಂಡ್) ಸಂಚಾರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲೂ ಜಾತಿಗಣತಿ ಸಮೀಕ್ಷೆ ವರದಿ ಜಾರಿಗೆ ಒತ್ತಡ; ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಮೋದಿ
Advertisement
ಅಲ್ಲದೇ ಸ್ಥಳ ನಿರೀಕ್ಷೆಯಲ್ಲಿದ್ದ ಚಂದ್ರಕಲಾ ಹೆಚ್. ಹೊಸಮನಿ ಅವರನ್ನು ಶಿವಮೊಗ್ಗ ಜಿಲ್ಲೆಯ ವಿನೋಬನಗರ ಪೊಲೀಸ್ ಠಾಣೆಗೆ, ಶಿವಶಂಕರ್ ಆರ್. ಗಣಚಾರಿ ಅವರನ್ನು ಹಾವೇರಿ ಜಿಲ್ಲೆಯ ಸಿಇಎನ್ ಪೊಲೀಸ್ ಠಾಣೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ.
ಎಸ್. ವಿಜಯಲಕ್ಷ್ಮಿ ಅವರನ್ನು ತುಮಕೂರು ಮಹಿಳಾ ಪೊಲೀಸ್ ಠಾಣೆಗೆ, ಗುರುರಾಜ್ ಎನ್. ಮೈಲಾರ್ ಅವರನ್ನು ಹುಬ್ಬಳ್ಳಿ-ಧಾರವಾಡ ಕೇಂದ್ರ ಪೊಲೀಸ್ ಠಾಣೆಗೆ, ರಾವ್ ಗಣೇಶ್ ಜನಾರ್ಧನ್ ಅವರನ್ನು ಬೆಂಗಳೂರು ಜಿಲ್ಲೆಯ ಹೊಸಹಳ್ಳಿಯ ಪೊಲೀಸ್ ಠಾಣೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
Web Stories