ಬೆಂಗಳೂರು: ಇಂದು 590 ಮಂದಿಗೆ ಕೊರೊನಾ ಬಂದಿದ್ದು, 366 ಮಂದಿ ಬಿಡುಗಡೆಯಾಗಿದ್ದಾರೆ. 6 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಇಂದು 43,394 ಮಂದಿಗೆ ಲಸಿಕೆ ನೀಡಲಾಗಿದ್ದು ಇಲ್ಲಿಯವರೆಗೆ ಒಟ್ಟು 10,57,677 ಲಸಿಕೆಯನ್ನು ವಿತರಿಸಲಾಗಿದೆ.
ಸೋಂಕಿತರ ಸಂಖ್ಯೆ 9,56,041ಕ್ಕೆ ಏರಿಕೆಯಾಗಿದ್ದು, ಇಲ್ಲಿಯವರೆಗೆ 9,36,616 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 7,033 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 7033 ಮಂದಿ ಮೃತಪಟ್ಟಿದ್ದಾರೆ. ಐಸಿಯುನಲ್ಲಿ 115 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಒಟ್ಟು 66,426 ಕೊರೊನಾ ಟೆಸ್ಟ್ ಮಾಡಿದ್ದು ಇಲ್ಲಿಯವರೆಗೆ ಒಟ್ಟು 1,94,27,973 ಕೊರೊನಾ ಟೆಸ್ಟ್ ಮಾಡಲಾಗಿದೆ.
ಬೆಂಗಳೂರಿನಲ್ಲಿ 363, ಮೈಸೂರು 56, ಬಳ್ಳಾರಿ 26, ಕಲಬುರಗಿ 25 ಮಂದಿಗೆ ಸೋಂಕು ಬಂದಿದೆ. ಬೆಂಗಳೂರಿನಲ್ಲಿ 49, ಕಲಬುರಗಿಯಲ್ಲಿ 10, ಮೈಸೂರಿನಲ್ಲಿ 5 ಮಂದಿ ಸೇರಿದಂತೆ ರಾಜ್ಯದಲ್ಲಿ ಒಟ್ಟು 115 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.