ಬೆಂಗಳೂರಿನಲ್ಲಿ ಐಪಿಎಲ್ ಹರಾಜು – 590 ಆಟಗಾರರಿಗೆ ಫೈನಲ್‌ ಪಟ್ಟಿಯಲ್ಲಿ ಸ್ಥಾನ

Public TV
1 Min Read
ipl 3 1

ಮುಂಬೈ: 15ನೇ ಆವೃತ್ತಿ ಐಪಿಎಲ್ ಹರಾಜಿಗೆ ಆಟಗಾರರ ಅಂತಿಮ ಪಟ್ಟಿ ಬಿಡುಗಡೆಯಾಗಿದೆ. ಒಟ್ಟು 590 ಆಟಗಾರರು ಅಂತಿಮಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

IPL 2

ಫೆಬ್ರವರಿ 12 ಮತ್ತು 13ರಂದು ಬೆಂಗಳೂರಿನಲ್ಲಿ ನಡೆಯಲಿರುವ ಆಟಗಾರರ ಮೆಗಾ ಹರಾಜು ಪ್ರಕ್ರಿಯೆಯಲ್ಲಿ 228 ಕ್ಯಾಪ್ಡ್ ಪ್ಲೇಯರ್ಸ್ ಮತ್ತು 355 ಅನ್‍ಕ್ಯಾಪ್ಡ್ ಆಟಗಾರರು ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ. ಇದನ್ನೂ ಓದಿ: ಧೋನಿ, ವಿಕ್ರಮ್ ಫೋಟೋ ವೈರಲ್

IPL 6

ತಾರಾ ಆಟಗಾರರಾದ ಶ್ರೇಯಸ್ ಅಯ್ಯರ್, ಶಿಖರ್ ಧವನ್, ಸುರೇಶ್ ರೈನಾ, ಡ್ವೇನ್ ಬ್ರಾವೋ, ಡುಪ್ಲೆಸಿಸ್, ಡೇವಿಡ್ ವಾರ್ನರ್, ಡಿಕಾಕ್, ಪ್ಯಾಟ್ ಕಮ್ಮಿನ್ಸ್ ಸೇರಿದಂತೆ ಹಲವು ಆಟಗಾರರು ತಾರಾ ಮೆರುಗಿನೊಂದಿಗೆ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

IPLDM6047

2 ಕೋಟಿ ರೂ. ಮೂಲಬೆಲೆಗೆ 48 ಆಟಗಾರರು, 1.5 ಕೋಟಿಗೆ 20, 1 ಕೋಟಿಗೆ 34 ಆಟಗಾರರು ಹರಾಜಿನಲ್ಲಿದ್ದಾರೆ. ಒಟ್ಟು 370 ಭಾರತೀಯ ಆಟಗಾರರು ಮತ್ತು 220 ಇತರ ದೇಶಗಳ ಆಟಗಾರರು ಹರಾಜಿನ ಅಂತಿಮ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಎಲ್ಲಾ ಮಾದರಿಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ ಟಿಮ್ ಬ್ರೆಸ್ನನ್

ಈ ಮೊದಲು ಐಪಿಎಲ್‍ ಹರಾಜಿಗೆ 1,214 ಮಂದಿ ಆಟಗಾರರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 896 ಭಾರತೀಯ ಆಟಗಾರರು ಮತ್ತು 318 ವಿದೇಶಿ ಆಟಗಾರರು ಹರಾಜಿಗೆ ತಮ್ಮ ಹೆಸರನ್ನು ಕೊಟ್ಟಿದ್ದರು. ಈ ಬಾರಿ 5 ಕ್ಯಾಟಗರಿಯಲ್ಲಿ ಆಟಗಾರರಿಗೆ ಬೆಲೆ ನಿಗದಿಪಡಿಸಲಾಗಿದೆ. 2 ಕೋಟಿ, 1.5 ಕೋಟಿ, 1 ಕೋಟಿ, 50 ಲಕ್ಷ ಮತ್ತು 20 ಲಕ್ಷ ರೂಪಾಯಿಯ ಮೂಲ ಬೆಲೆ ಕ್ಯಾಟಗರಿಯಲ್ಲಿ ಆಟಗಾರರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದರು. ಇದೀಗ ಫೈನಲ್‌ ಪಟ್ಟಿಯಲ್ಲಿ 590 ಆಟಗಾರರು ಸ್ಥಾನ ಪಡೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *