ಕ್ಯಾನ್ಬೆರಾ: ಇಲ್ಲಿನ ಅಡಿಲೇಡ್ ಓವೆಲ್ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ಆಸೀಸ್ ಸ್ಟಾರ್ ಆಲ್‌ರೌಂಡರ್ ಗ್ಲೇನ್ ಮ್ಯಾಕ್ಸ್‌ವೆಲ್ (Glenn Maxwell) 120 ರನ್ ಸಿಡಿಸುವ ಮೂಲಕ 5 ಅಂತಾರಾಷ್ಟ್ರೀಯ ಟಿ20 (T20I Cricket) ಶತಕ ಸಿಡಿಸಿದ ವಿಶ್ವದ 2ನೇ ಆಟಗಾರ ಎನಿಸಿಕೊಂಡಿದ್ದಾರೆ.
Advertisement
ಈ ಮೂಲಕ 4 ಶತಕ ಸಿಡಿಸಿರುವ ಸೂರ್ಯಕುಮಾರ್ ಯಾದವ್ (Suryakumar Yadav) ಅವರ ದಾಖಲೆಯನ್ನ ಮುರಿದಿದ್ದಾರೆ. ಜೊತೆಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅವರ ಶತಕ ದಾಖಲೆಯನ್ನು ಸರಿಗಟ್ಟಿದ್ದಾರೆ. ಇತ್ತೀಚೆಗೆ ಆಫ್ಘಾನಿಸ್ತಾನ ವಿರುದ್ಧ ನಡೆದ 3ನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ 121 ರನ್ ಸಿಡಿಸುವ ಮೂಲಕ ತಮ್ಮ 5ನೇ ಅಂತಾರಾಷ್ಟ್ರೀಯ ಶತಕ ಪೂರೈಸಿದ್ದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ಟಿ20ಯಲ್ಲಿ 5 ಶತಕ ಸಿಡಿಸಿ ರೋಹಿತ್ ಶರ್ಮಾ ದಾಖಲೆ
Advertisement
Advertisement
ಅಡಿಲೇಡ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಕ್ರೀಸ್‌ಗಿಳಿದ ಆಸೀಸ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಬರೋಬ್ಬರಿ 241 ರನ್ ಬಾರಿಸಿತು. 4ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಗ್ಲೇನ್ ಮ್ಯಾಕ್ಸ್‌ವೆಲ್ 55 ಎಸೆತಗಳಲ್ಲಿ ಬರೋಬ್ಬರಿ 120 ರನ್ ಬಾರಿಸಿದರು. 25 ಎಸೆತಗಳಲ್ಲಿ 50 ರನ್ ಸಿಡಿಸಿದ್ದ ಮ್ಯಾಕ್ಸಿ, 50 ಎಸೆತಗಳಲ್ಲಿ 100 ರನ್ ಬಾರಿಸಿದ್ರು. ಒಟ್ಟಾರೆ ಎದುರಿಸಿದ 55 ಎಸೆತಗಳಲ್ಲಿ 120 ರನ್ ಸಿಡಿಸಿ ಮಿಂಚಿದರು. ಇದರಲ್ಲಿ 12 ಬೌಂಡರಿ ಹಾಗೂ 8 ಸಿಕ್ಸರ್‌ಗಳೂ ಸೇರಿವೆ.
Advertisement
ಪಂಚ ಶತಕ ಸಿಡಿಸಿದ ವಿಶ್ವದ 2ನೇ ಆಟಗಾರ:
ಅಫ್ಘಾನಿಸ್ತಾನ ವಿರುದ್ಧ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ 5 ಶತಕ ಸಿಡಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದರು. ಇದೀಗ ಮ್ಯಾಕ್ಸಿ 5 ಶತಕ ಸಿಡಿಸಿದ ವಿಶ್ವದ 2ನೇ ಆಟಗಾರ ಎನಿಸಿಕೊಂಡಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಅವರ ದಾಖಲೆಯನ್ನ ಸರಿಗಟ್ಟಿದ್ದಾರೆ. ಇದನ್ನೂ ಓದಿ: 95 ಎಸೆತಗಳಲ್ಲಿ ಬರೋಬ್ಬರಿ 190 ರನ್ – ವಿಶ್ವದಾಖಲೆ ನಿರ್ಮಿಸಿದ ರಿಂಕು-ರೋಹಿತ್ ಜೊತೆಯಾಟ
ರೋಹಿತ್ ಶರ್ಮಾ 143 ಇನ್ನಿಂಗ್ಸ್ಗಳಲ್ಲಿ 5 ಶತಕ ಸಿಡಿಸಿದ್ದರೆ, ಮ್ಯಾಕ್ಸ್ವೆಲ್ ಕೇವಲ 94 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಸೂರ್ಯಕುಮಾರ್ ಯಾದವ್ ಕೇವಲ 57 ಇನ್ನಿಂಗ್ಸ್‌ಗಳಲ್ಲಿ 4 ಶತಕ ಸಿಡಿಸಿ 3ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ನಾಯಕನಾಗಿ ಸಿಕ್ಸರ್‌ಗಳಿಂದಲೇ ಹೊಸ ದಾಖಲೆ – ನಂ.1 ಪಟ್ಟಕ್ಕೇರಿದ ರೋಹಿತ್ ಶರ್ಮಾ
ಟಾಪ್-5 ಟಿ20 ಶತಕ ವೀರರು ಇವರೇ:
1) ರೋಹಿತ್ ಶರ್ಮಾ (ಭಾರತ) – 5
2) ಗ್ಲೇನ್ ಮ್ಯಾಕ್ಸ್‌ವೆಲ್ (ಆಸ್ಟ್ರೇಲಿಯಾ) – 5
3) ಸೂರ್ಯಕುಮಾರ್ ಯಾದವ್ (ಭಾರತ) – 4
4) ಸಬಾವೂನ್ ಡೇವಿಜಿ (ಜೆಕ್ ರಿಪಬ್ಲಿಕ್)- 3
5) ಕಾಲಿನ್ ಮುನ್ರೊ (ನ್ಯೂಜಿಲೆಂಡ್) – 3