ಬರ್ಮಿಂಗ್‌ಹ್ಯಾಮ್: ಎಡ್ಜಾಬಸ್ಟನ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ನ ಮೊದಲ ದಿನವೇ ಅಮೋಘ ಶತಕ ಸಿಡಿಸಿದ ವಿಕೆಟ್ ಕೀಪರ್ ರಿಷಭ್ ಪಂತ್ 17 ವರ್ಷಗಳ ಬಳಿಕ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
Advertisement
ಟೆಸ್ಟ್ ಕ್ರಿಕೆಟ್‌ನಲ್ಲಿ 89 ಎಸೆತಗಳಲ್ಲಿ 5ನೇ ಬಾರಿಗೆ ಶತಕ ಸಿಡಿಸಿದ ಪಂತ್ ಅತಿ ವೇಗದ ಶತಕ ಬಾರಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಅವರು 2005ರಲ್ಲಿ ಫೈಸಲಾಬಾದ್‌ನಲ್ಲಿ ಪಾಕಿಸ್ತಾನದ ವಿರುದ್ಧ 93 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ದಾಖಲೆ ಮಾಡಿದ್ದರು. ಪಂತ್ ಕೇವಲ 111 ಎಸೆತಗಳಲ್ಲಿ 146 ರನ್ ಗಳಿಸಿದರು. ಇದರಲ್ಲಿ 4 ಸಿಕ್ಸರ್ ಹಾಗೂ 19 ಬೌಂಡರಿಗಳೂ ಒಳಗೊಂಡಿವೆ.
Advertisement
Advertisement
89 ಎಸೆತಗಳಲ್ಲಿ ದಾಖಲಾದ ಪಂತ್ ಶತಕವು ಅತ್ಯಂತ ವೇಗದ ಶತಕ ಎನಿಸಿಕೊಳ್ಳುವ ಜೊತೆಗೆ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಅವರ ದಾಖಲೆಯನ್ನೂ ಸೋಲಿಸಿದ್ದಾರೆ. ಇದನ್ನೂ ಓದಿ: ಕಪಿಲ್ ದೇವ್ ನಂತರ 35 ವರ್ಷಗಳ ಬಳಿಕ ಭಾರತದ ನಾಯಕತ್ವ ಪಡೆದ ವೇಗಿ – ಬುಮ್ರಾ ಕ್ಯಾಪ್ಟನ್, ಪಂತ್ ವೈಸ್ ಕ್ಯಾಪ್ಟನ್
Advertisement
ಪಂಥ್ ಅಮೋಘ ಶತಕ: ಇಂಗ್ಲೆಂಡ್ ವಿರುದ್ಧದ ಎಡ್ಜಾಬಸ್ಟನ್ ಕ್ರೀಡಾಂಗಣದಲ್ಲಿ ಅಂತಿಮ ಟೆಸ್ಟ್ನ ಮೊದಲ ದಿನವಾದ ಶುಕ್ರವಾರ ವಿಕೆಟ್ ಕೀಪರ್-ಬ್ಯಾಟರ್ ರಿಷಬ್ ಪಂತ್ ಅವರ ಅದ್ಭುತ ಶತಕ ಮತ್ತು ರವೀಂದ್ರ ಜಡೇಜಾ ಅವರ 222 ರನ್‌ಗಳ ಅಮೋಘ ಜೊತೆಯಾಟದ ನೆರವಿನಿಂದ ಭಾರತ 7 ವಿಕೆಟ್ ಕಳೆದುಕೊಂಡು 338 ರನ್ ಗಳಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 100 ರನ್‌ಗಳ ಗಡಿ ದಾಟುವ ಮೊದಲೇ ಅಗ್ರ ಕ್ರಮಾಂಕದ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಂಗ್ಲೆಂಡ್‌ನ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ಪ್ರಮುಖ 3 ವಿಕೆಟ್ ಕಿತ್ತು ಭಾರತಕ್ಕೆ ಆಘಾತ ನೀಡಿದ್ದರು. ಇದನ್ನೂ ಓದಿ: ಒಂದು ದಿನ ಮುಂಚಿತವಾಗಿ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್ – ತಂಡದಲ್ಲಿ ಯಾರೆಲ್ಲಾ ಇದ್ದಾರೆ?
ನಂತರ 6ನೇ ವಿಕೆಟ್‌ಗೆ ಜೊತೆಯಾದ ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ ಪ್ರತಿ ಹೋರಾಟ ನಡೆಸಿ ಅರ್ಧಶತಕದ ಜೊತೆಯಾಟ ಕಟ್ಟಿದರು. ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ರಿಷಭ್ ಪಂತ್ ಇಂಗ್ಲೆಂಡ್ ನೆಲದಲ್ಲಿ ಮತ್ತೊಂದು ಅರ್ಧಶತಕ ಬಾರಿಸಿ ತಂಡಕ್ಕೆ ನೆರವಾದರು. ಸದ್ಯ ಎಚ್ಚರಿಕೆಯಿಂದ ಬ್ಯಾಟ್ ಮಾಡುತ್ತಿರುವ ರವೀಂದ್ರ ಜಡೇಜಾ 163 ಎಸೆತಗಳನ್ನು ಎದುರಿಸಿ 10 ಬೌಂಡರಿಗಳೊಂದಿಗೆ 83 ರನ್‌ಗಳನ್ನು ಕಲೆಹಾಕಿದ್ದಾರೆ. ಇವರಿಗೆ ಜೊತೆಯಾಗಿ ಮೊಹಮ್ಮದ್ ಶಮಿ ಕ್ರೀಸ್‌ನಲ್ಲಿ ಇದ್ದಾರೆ.
5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1ರ ಅಂತರದಲ್ಲಿ ಮೇಲುಗೈ ಸಾಧಿಸಿದ್ದು, ಈ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳಲು ಬುಮ್ರಾ ಪಡೆ ಸಜ್ಜಾಗಿದೆ.