ಚಿಕ್ಕಮಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ವೀಕ್ಷಣೆ ವೇಳೆ ನಗರದ ಮಿಲನ ಚಿತ್ರಮಂದಿರದಲ್ಲಿ ಹಾಡಹಗಲೇ ಲಾಂಗು, ಮಚ್ಚುಗಳಿಂದ ನಡೆದಿದ್ದ ಯುವಕರ ಹೊಡೆದಾಟ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಘಟನೆಗೆ ಸಂಬಂಧಿಸಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಾಲ್ಕೇ ದಿನಗಳಲ್ಲಿ 6 ಆರೋಪಿಗಳನ್ನ ಬಂಧಿಸಿರೋ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗಳನ್ನ 11 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಬರ್ತ್ ಡೇ ಆಚರಣೆ – ಸರಿಯಾಗಿ 12 ಗಂಟೆಗೆ ಕೇಕ್ ಕಟ್
Advertisement
Advertisement
ಜುಲೈ 28 ರಂದು ನಗರದ ಮಿಲನ ಚಿತ್ರಮಂದಿರದಲ್ಲಿ ವಿಕ್ರಾಂತ್ ರೋಣ ಸಿನಿಮಾ ವೀಕ್ಷಣೆ ವೇಳೆ 2 ಗುಂಪುಗಳ ನಡುವೆ ಮಾರಾಮಾರಿ ನಡೆದು ವೀಡಿಯೋ ಸಾಕಷ್ಟು ವೈರಲ್ ಆಗಿತ್ತು. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಂತರ ತಲೆಮರೆಸಿಕೊಂಡಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
Advertisement
ಏನಿದು ಘಟನೆ?
ಸಿನಿಮಾ ವೀಕ್ಷಣೆ ವೇಳೆ ಯುವಕನೋರ್ವ ಪದೇ-ಪದೇ ಹೊರಗೆ ಹೋಗಿ ಬರುತ್ತಿದ್ದನು. ಇದೇ ವಿಷಯವಾಗಿ ಚಿತ್ರ ಮಂದಿರದ ಒಳಗೆ ಎರಡು ಗುಂಪುಗಳ ಮಧ್ಯೆ ಸಣ್ಣ ಗಲಾಟೆಯಾಗಿತ್ತು. ಹೊರಗೆ ಬಂದವರು ಮತ್ತೆ ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಕಾರಿನಲ್ಲಿಟ್ಟಿದ್ದ ಮಚ್ಚು, ಲಾಂಗು, ಡ್ರಾಗರ್ಗಳಿಂದ ಹೊಡೆದಾಡಿದ್ದರು. ಗಲಾಟೆಯಲ್ಲಿ ಭರತ್ ಹಾಗೂ ಜೀವನ್ ಎಂಬ ಇಬ್ಬರಿಗೆ ತೀವ್ರ ಗಾಯವಾಗಿದ್ದು, ಇಬ್ಬರಿಗೂ ಹಾಸನದಲ್ಲಿ ಚಿಕಿತ್ಸೆ ಮುಂದುವರಿದಿದೆ. ಬಂಧಿತ ಆರೋಪಿಗಳು ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿ ತಲೆಮರೆಸಿಕೊಂಡಿದ್ದರು. ಇದನ್ನೂ ಓದಿ: ತಿರುಪತಿಗೆ ಒಂದೇ ತಿಂಗಳಲ್ಲಿ 140 ಕೋಟಿ ದಾಖಲೆ ಕಾಣಿಕೆ ಸಂಗ್ರಹ
ಆರೋಪಿಗಳ ಪತ್ತೆಗಾಗಿ ಚಿಕ್ಕಮಗಳೂರು ಡಿವೈಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ 4 ತನಿಖಾ ತಂಡಗಳನ್ನು ರಚಿಸಿದ್ದರು. 8 ಜನರಲ್ಲಿ 6 ಮಂದಿ ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿದ್ದರು. ಇನ್ನಿಬ್ಬರು ಪರೋಕ್ಷವಾಗಿ ಸಹಕಾರ ನೀಡಿದ ಆರೋಪಿಗಳಾಗಿದ್ದಾರೆ. ಪ್ರಕರಣ ಸಂಬಂಧ ಇನ್ನೂ ಮೂರ್ನಾಲ್ಕು ಜನ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ. ಅವರನ್ನೂ ಬಂಧಿಸುವುದಾಗಿ ಎಸ್ಪಿ ಅಕ್ಷಯ್ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಪಿಐಗಳಾದ ಗುರುಪ್ರಸಾದ್, ಜಯರಾಮ್ ಸೇರಿದಂತೆ ಇಲಾಖೆಯ ಸಿಬ್ಬಂದಿ ಸಹಕಾರ ನೀಡಿದ್ದಾರೆ.