ರಾಮನಗರ: ಚನ್ನಪಟ್ಟಣ (Channapatna) ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ (By Election) ದಿನಗಣನೆ ನಡೆಯುತ್ತಿರುವಾಗಲೇ ಬಿಜೆಪಿ ಮತ್ತು ಜೆಡಿಎಸ್‌ಗೆ ಕಾಂಗ್ರೆಸ್ (Congress) ಬಿಗ್ ಶಾಕ್ ನೀಡಿದೆ.
ಚನ್ನಪಟ್ಟಣ ನಗರಸಭೆಗೆ ಬಿಜೆಪಿಯಿಂದ ಗೆದ್ದಿದ್ದ 7 ಸದಸ್ಯರ ಪೈಕಿ 6 ಮಂದಿ ಮಾಜಿ ಸಂಸದ ಡಿ.ಕೆ. ಸುರೇಶ್ (DK Suresh) ಸಮ್ಮುಖದಲ್ಲಿ ಮಂಗಳವಾರ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ. ಚನ್ನಪಟ್ಟಣ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 6 ಮಂದಿ ನಗರಸಭೆ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ನಗರಸಭಾ ಸದಸ್ಯರಾದ ಚಂದ್ರು, ಮಂಗಳಮ್ಮ, ಮನೋಹರ್, ಕಮಲ, ಜಯಮಾಲ, ಕಸ್ತೂರಿ ಕಾಂಗ್ರೆಸ್ ಸೇರಿದ್ದಾರೆ. ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ; ದ್ವಿಚಕ್ರ ವಾಹನಗಳ ಪ್ರವೇಶಕ್ಕೆ ನಿರ್ಬಂಧ
2021-22ರಲ್ಲಿ ಇವರು ನಗರಸಭೆಗೆ ಬಿಜೆಪಿಯಿಂದ ಆಯ್ಕೆ ಆಗಿದ್ದರು. ಒಟ್ಟು 31 ಸದಸ್ಯರ ಪೈಕಿ 07 ಮಂದಿ ಬಿಜೆಪಿಯಿಂದ ಗೆದ್ದಿದ್ದರು. 16 ಮಂದಿ ಜೆಡಿಎಸ್‌ನಿಂದ ಗೆದ್ದಿದ್ದರು. ಎರಡು ತಿಂಗಳ ಹಿಂದೆ 13 ಮಂದಿ ಜೆಡಿಎಸ್ ಸದಸ್ಯರು ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದರು. ಇದನ್ನೂ ಓದಿ: ಕೋಲಾರ ಜಿಲ್ಲಾಡಳಿತದಿಂದಲೂ ವಕ್ಫ್‌ಗೆ ಸರ್ಕಾರಿ ಜಮೀನು ಮಂಜೂರು ಆರೋಪ