ವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ (Bhutnal Lake) 6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ತಾಯಿ ಶೋಭಾ ಜಾಲಗೇರಿ (45), ವಿದ್ಯಾ (16), ಸುವರ್ಣ (14), ಗೌಡೇಶ್ (ಮೂಗ) (10), ವಿಕಾಸ (5) ಸಾನಿಕಾ (7) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ| ಚಳವಳಿಯ ಬೆಳವಣಿಗೆ ಕಳವಳಕಾರಿ – ಮೇಯರ್ ಮಮ್ದಾನಿ ವಿರೋಧ
ಆ.23ರಂದು ಗಂಡ ಮಲಕಾರಿ ಜೊತೆ ಶೋಭಾ ಜಗಳವಾಗಿತ್ತು. ಈ ವೇಳೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಆನಂತರ ಆ.24ರಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಇದಾದ ನಂತರ ಇಂದು (ಆ.26) ಭೂತನಾಳ ಕೆರೆಯಲ್ಲಿ 6 ಜನರ ಶವ ಪತ್ತೆಯಾಗಿವೆ. ಬೆಳಿಗ್ಗೆ ವಾಯುವಿಹಾರಕ್ಕಾಗಿ ಬಂದಿದ್ದ ಸಂತೋಷ ಎಂಬುವವರು ಶವಗಳನ್ನ ನೋಡಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ವರದಿ ಪ್ರಕಾರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಈ ಸಂಬಂಧ ಆದರ್ಶ ನಗರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: Bro Wait, ಭಾರತ್ ಮಾತಾ ಕಿ ಜೈ ಶುರು ಮಾಡೋಣ – ರಾಗಾ ಪಿತೃಪ್ರಧಾನ ವ್ಯವಸ್ಥೆ ಹೇಳಿಕೆಗೆ ಕಂಗನಾ ತಿರುಗೇಟು
