ಭೋಪಾಲ್: ಕೇವಲ 15 ದಿನಗಳ ಅಂತರದಲ್ಲಿ 6 ಮಕ್ಕಳು ಕಿಡ್ನಿ ವೈಫಲ್ಯವಾಗಿ ಸಾವನ್ನಪ್ಪಿರುವ ಧಾರುಣ ಘಟನೆ ಮಧ್ಯಪ್ರದೇಶದ (Madhya Pradesh) ಛಿಂದ್ವಾರದಲ್ಲಿ (Chhindwara) ನಡೆದಿದೆ.
ಆರಂಭದಲ್ಲಿ ಋತುಮಾನದ ಜ್ವರದ ಸಾಮಾನ್ಯ ಸಮಸ್ಯೆಗಳಂತೆ ಕಂಡುಬಂದಿದ್ದ ಈ ಘಟನೆ ಈಗ ಭೀಕರ ತಿರುವು ಪಡೆದುಕೊಂಡಿದ್ದು, ಮಕ್ಕಳಿಗೆ ನೀಡಿದ ಕೆಮ್ಮಿನ ಸಿರಪ್‌ನ (Cough Syrup) ಅಡ್ಡಪರಿಣಾಮದಿಂದಾಗಿ ಮಕ್ಕಳು ಕಿಡ್ನಿ ವೈಫಲ್ಯವಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ರಾಮಚಂದ್ರ ಗುಹಾಗೆ ರಾಜ್ಯ ಸರ್ಕಾರದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ
ಸಾವನ್ನಪ್ಪಿದ ಮಕ್ಕಳನ್ನು ಐದು ವರ್ಷದೊಳಗಿನವರು ಎಂದು ಹೇಳಲಾಗಿದ್ದು, ಎಲ್ಲಾ ಮಕ್ಕಳು ಮೊದಲು ಶೀತ ಮತ್ತು ಸೌಮ್ಯ ಜ್ವರದ ವಿಚಾರವಾಗಿ ಸ್ಥಳೀಯ ಕ್ಲೀನಿಕ್‌ನಲ್ಲಿ ಚಿಕಿತ್ಸೆ ಪಡೆದಿದ್ದರು. ಸ್ಥಳೀಯ ವೈದ್ಯರು ಕೆಮ್ಮಿನ ಸಿರಪ್‌ಗಳು ಸೇರಿದಂತೆ ನಿಯಮಿತ ಔಷಧಿಗಳನ್ನು ಸೂಚಿಸಿದರು. ಅದನ್ನು ಸೇವಿಸಿದ ನಂತರ ಮಕ್ಕಳು ಚೇತರಿಸಿಕೊಳ್ಳುತ್ತಿರುವಂತೆ ತೋರುತ್ತಿತ್ತು. ಆದರೆ ಕೆಲವೇ ದಿನಗಳಲ್ಲಿ ಮತ್ತೆ ರೋಗ ಲಕ್ಷಣಗಳು ಮರಳಿದವು. ನಂತರ ಮೂತ್ರ ವಿಸರ್ಜನೆಯಲ್ಲಿ ಹಠಾತ್ ಮತ್ತು ಆತಂಕಕಾರಿ ಇಳಿಕೆ ಕಂಡುಬಂದಿತು. ಸ್ಥಿತಿಯು ಬೇಗನೆ ಹದಗೆಟ್ಟು ಮೂತ್ರಪಿಂಡದ ಸೋಂಕುಗಳಾಗಿ ಮಾರ್ಪಟ್ಟಿತು. ಬಳಿಕ ಉನ್ನತ ಚಿಕಿತ್ಸೆಗಾಗಿ ಮಹಾರಾಷ್ಟ್ರದ ನಾಗ್ಪುರಕ್ಕೆ ಮಕ್ಕಳನ್ನು ಕರೆದೊಯ್ಯಲಾಗಿದ್ದರೂ, ಮೂವರು ಮಕ್ಕಳು ಅಲ್ಲಿಯೇ ಸಾವನ್ನಪ್ಪಿದರು. ಇದನ್ನೂ ಓದಿ: ದಸರಾ ಜಂಬೂಸವಾರಿಗೆ ಕೌಂಟ್ ಡೌನ್ – ಭರದಿಂದ ಸಾಗಿದ ತಯಾರಿ
ಮಕ್ಕಳ ಸಾವಿಗೆ ಕೆಮ್ಮಿನ ಸಿರಪ್ ಕಾರಣ ಎಂದು ಶಂಕಿಸಲಾಗುತ್ತಿದ್ದು, ವಿಷಕಾರಿ ಡೈಥಿಲೀನ್ ಗ್ಲೈಕೋಲ್ ಬೆರೆಸಿದ ಕಲುಷಿತ ಕೆಮ್ಮಿನ ಸಿರಪ್ ಸಾವುಗಳಿಗೆ ಕಾರಣ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಮಕ್ಕಳ ಮೂತ್ರಪಿಂಡದ ಬಯಾಪ್ಸಿ ಪರೀಕ್ಷೆಯಲ್ಲಿ ಔಷಧೀಯ ವಿಷಕ್ಕೆ ಸಂಬಂಧಿಸಿದ ವಿಷಕಾರಿ ರಾಸಾಯನಿಕವಾದ ಡೈಥಿಲೀನ್ ಗ್ಲೈಕಾಲ್ ಮಾಲಿನ್ಯ ಇರುವುದು ಬೆಳಕಿಗೆ ಬಂದಾಗ ಮಹತ್ವದ ತಿರುವು ಸಿಕ್ಕಿತು. ಹೆಚ್ಚಿನ ಮಕ್ಕಳಿಗೆ ಕೋಲ್ಡ್ರಿಫ್ ಮತ್ತು ನೆಕ್ಸ್ಟ್ರೋ-ಡಿಎಸ್ ಸಿರಪ್‌ಗಳನ್ನು ನೀಡಲಾಗಿತ್ತು. ಇದನ್ನೂ ಓದಿ: ಯುವತಿ ಮೇಲೆ ಗ್ಯಾಂಗ್ ರೇಪ್ – ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಅರೆಸ್ಟ್
ಚಿಂದ್ವಾರ ಜಿಲ್ಲಾಧಿಕಾರಿ ಶೀಲೇಂದ್ರ ಸಿಂಗ್ ಅವರು ಜಿಲ್ಲೆಯಾದ್ಯಂತ ಎರಡು ಸಿರಪ್‌ಗಳ ಮಾರಾಟವನ್ನು ತಕ್ಷಣವೇ ನಿಷೇಧಿಸಿದರು ಮತ್ತು ಇದರ ಬಳಕೆ ಮಾಡದಂತೆ ವೈದ್ಯರು, ಔಷಧಾಲಯಗಳು ಮತ್ತು ಪೋಷಕರಿಗೆ ತುರ್ತು ಸಲಹೆಯನ್ನು ನೀಡಿದರು. ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲಾಡಳಿತವು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ತಂಡವನ್ನು ಪರೀಕ್ಷೆಗೆ ಕರೆದಿದ್ದು, ತನಿಖೆ ಪ್ರಗತಿಯಲ್ಲಿದೆ. ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ – ಡಿಎ 3% ಏರಿಕೆ