‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಕಾರ್ಯಕ್ರಮ ಇನ್ನೇನು ಒಂದೇ ವಾರದಲ್ಲಿ ಮುಗಿಯಲಿದೆ. ಗೌತಮಿ ಮತ್ತು ಧನರಾಜ್ ಆಚಾರ್ ಎಲಿಮಿನೇಟ್ ಆಗಿದ್ದಾರೆ. ಫಿನಾಲೆ ವಾರಕ್ಕೆ 6 ಘಟಾನುಘಟಿ ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ:ಇದು ನನ್ನ ಕೊನೆಯ ನಿರೂಪಣೆ, ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು: ಸುದೀಪ್ ಭಾವುಕ ಪೋಸ್ಟ್
ಯಾರು ಎಲಿಮಿನೇಟ್ ಆಗ್ತಾರೆ? ಯಾರು ಫಿನಾಲೆ ವಾರಕ್ಕೆ ತಲುಪುತ್ತಾರೆ ಎಂಬುದಕ್ಕೆ ಉತ್ತರ ಸಿಕ್ಕಿದೆ. ಹನುಮಂತ, ತ್ರಿವಿಕ್ರಮ್, ಭವ್ಯಾ ಮೋಕ್ಷಿತಾ, ರಜತ್, ಉಗ್ರಂ ಮಂಜು ಫಿನಾಲೆ ವಾರಕ್ಕೆ ಪ್ರವೇಶ ಪಡೆದಿದ್ದಾರೆ. ಈ ಮೂಲಕ ಮತ್ತಷ್ಟು ಆಟ ರೋಚಕವಾಗಿ ಮೂಡಿ ಬರುತ್ತಿದೆ.
ಇನ್ನೂ ಬಿಗ್ ಬಾಸ್ ಶೋಗೆ ಅಧಿಕೃತವಾಗಿ ವಿದಾಯ ಹೇಳುತ್ತಿರುವ ಬಗ್ಗೆ ಸುದೀಪ್ ಸೋಶಿಯಲ್ ಕ್ಲ್ಯಾರಿಟಿ ನೀಡಿದ್ದಾರೆ. ಕಳೆದ 11 ಸೀಸನ್‌ಗಳಿಂದ ನಾನು ಬಿಗ್‌ಬಾಸ್ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ. ನೀವು ತೋರಿಸಿದ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫೈನಲ್ ನನ್ನ ಕೊನೆಯ ನಿರೂಪಣೆ. ನಿಮ್ಮನ್ನು ಮನರಂಜಿಸಲು ನಾನು ಪ್ರಯತ್ನಿಸುತ್ತೇನೆ.
ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು. ಇದನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿದ್ದೇನೆ ಎಂಬ ಸಂತೋಷ ನನಗಿದೆ. ಈ ಅವಕಾಶ ಕೊಟ್ಟ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳು. ನಿಮ್ಮೆಲ್ಲರ ಮೇಲೂ ಅಪಾರವಾದ ಪ್ರೀತಿ ಮತ್ತು ಗೌರವವಿದೆ ಎಂದು ಕಿಚ್ಚ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇದು ಫ್ಯಾನ್ಸ್‌ಗೆ ಬೇಸರ ಮೂಡಿಸಿದೆ.