ಹೈದರಾಬಾದ್: ರಾಸಾಯನಿಕ ಸಂಗ್ರಹಿಸಿದ್ದ ಗೋಡೌನ್‍ನಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ (Fire Accident) ಆರು ಮಂದಿ ಸಾವಿಗೀಡಾದ ಘಟನೆ ತೆಲಂಗಾಣದ (Telangana) ನಾಂಪಲ್ಲಿಯಲ್ಲಿ ನಡೆದಿದೆ.
ನಾಲ್ಕು ಅಂತಸ್ತಿನ ಕಟ್ಟಡದ ಮೊದಲನೇ ಮಹಡಿಯಲ್ಲಿ ರಾಸಾಯನಿಕಗಳನ್ನು ಸಂಗ್ರಹಿಸಲಾಗಿತ್ತು. ಅದೇ ಕಟ್ಟಡದ ನೆಲ ಮಾಳಿಗೆಯಲ್ಲಿ ಕಾರನ್ನು ರಿಪೇರಿ ಮಾಡಲಾಗುತ್ತಿತ್ತು. ಈ ವೇಳೆ ಕಿಡಿಗಳಿಂದ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗಂಗೊಳ್ಳಿಯಲ್ಲಿ ಅಗ್ನಿ ಅವಘಡ – ಹೊತ್ತಿ ಉರಿದ 7 ಬೋಟ್‍ಗಳು
ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ. ಯಾವ ಕೆಮಿಕಲ್ಸ್‍ಗಳನ್ನು ಅಲ್ಲಿ ಸಂಗ್ರಹಿಸಲಾಗಿತ್ತು ಎಂಬುದು ತಿಳಿದು ಬಂದಿಲ್ಲ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಹೈದರಾಬಾದ್‍ನ ಕೇಂದ್ರ ವಲಯದ ಡಿಸಿಪಿ ವೆಂಕಟೇಶ್ವರ್ ರಾವ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಟೈಗರ್ 3 ಪ್ರದರ್ಶನ ವೇಳೆ ಥಿಯೇಟರ್ ಒಳಗೆ ಪಟಾಕಿ ಸಿಡಿಸಿದ ಫ್ಯಾನ್ಸ್: ತಪ್ಪಿದ ಅನಾಹುತ