ಮುಂಬೈ: ಮಹಾರಾಷ್ಟ್ರದ ವಾರ್ಧಾ ಬಳಿಯಿರುವ ಸೇನಾ ಶಸ್ತ್ರಾಸ್ತ್ರ ಸಂಗ್ರಹಾಲಯ ಪುಲ್‍ಗಾಂವ್ ನಲ್ಲಿ ನಡೆದ ಸ್ಫೋಟದಿಂದಾಗಿ 6 ಮಂದಿ ಸಾವನ್ನಪ್ಪಿ 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪುಲ್‍ಗಾಂವ್ ನಲ್ಲಿ ಸಂಭವಿಸಿದ ಸ್ಫೋಟದಿಂದಾಗಿ, ಶಸ್ತ್ರಾಸ್ತ್ರ ಕಾರ್ಖಾನೆಯ ಸಿಬ್ಬಂದಿ ಸೇರಿದಂತೆ 5 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಇವರಲ್ಲಿ 4 ಮಂದಿ ಸ್ಥಳದಲ್ಲೇ ಮೃತಪಟ್ಟರೇ, ಇನ್ನಿಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾರೆ. ಇವರಲ್ಲದೇ 11 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
Advertisement
#SpotVisuals: Two killed, several injured in an explosion in Pulgaon Army depot in Wardha. Further details awaited. #Maharashtra pic.twitter.com/9hHbsBXLbO
— ANI (@ANI) November 20, 2018
Advertisement
ಮಧ್ಯಪ್ರದೇಶದ ಕಮಾರಿಯಾ ಶಸ್ತ್ರಾಸ್ತ್ರ ಕಾರ್ಖಾನೆಯಿಂದ 23 ಎಂಎಂ ಫಿರಂಗಿಗಳನ್ನು ವಾರ್ಧಾ ಬಳಿಯಿರುವ ಪುಲ್‍ಗಾಂವ್ ನ ಪ್ರದೇಶದಲ್ಲಿ ವಿಲೇವಾರಿ ಮಾಡಲಾಗುತ್ತಿತ್ತು. ಮಂಗಳವಾರ ಬೆಳಗ್ಗೆ 7.15ರ ಸುಮಾರಿಗೆ ಕಾರ್ಮಿಕನ ಕೈಯಿಂದ ಬಿದ್ದ ಫಿರಂಗಿಯೊಂದು ಏಕಾಏಕಿ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನಿಖಿಲ್ ಪಿಂಗ್‍ಕಲ್ ಹೇಳಿದ್ದಾರೆ.
Advertisement
ಈ ಬಗ್ಗೆ ಸೇನಾ ಅಧಿಕಾರಿಗಳು ಮಾತನಾಡಿ, ಕಮಾರಿಯಾ ಶಸ್ತ್ರಾಸ್ತ್ರ ಕಾರ್ಖಾನೆಯಿಂದ ತಂದಿದ್ದ ಫಿರಂಗಿಗಳನ್ನು ಕಂಟ್ರಾಕ್ಟರ್ ಹಾಗೂ ಕಾರ್ಮಿಕರ ನೆರವಿನಿಂದ ಪುಲ್‍ಗಾಂವ್ ಪ್ರದೇಶದಲ್ಲಿ ವಿಲೇವಾರಿ ಮಾಡಲಾಗುತ್ತಿತ್ತು. ಈ ವೇಳೆ ಅವಧಿ ಮುಗಿದ ಶೆಲ್ ವೊಂದು ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ.
Advertisement
ಪುಲ್‍ಗಾಂವ್ ಶಸ್ತ್ರಾಸ್ತ್ರ ಸಂಗ್ರಹಾಲಯ ಏಷ್ಯಾದಲ್ಲಿಯೇ ಎರಡನೇ ಅತಿ ದೊಡ್ಡ ಯುದ್ಧ ಸಾಮಗ್ರಿ ಸಂಗ್ರಹಾಲಯವಾಗಿದೆ. 2016ರಲ್ಲಿಯೂ ಇದೇ ಪುಲ್‍ಗಾಂವ್ ಸೇನಾ ಸಂಗ್ರಹಾಲಯದಲ್ಲಿ ಇಂತಹುದೇ ದುರ್ಘಟನೆ ಸಂಭವಿಸಿ 16 ಮಂದಿ ಸಾವಿಗೀಡಾಗಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews