ಡೆಹ್ರಾಡೂನ್: ವಿಧಾನಸಭಾ ಚುನಾವಣೆಗೆ ಮುನ್ನ, ಉತ್ತರಾಖಂಡ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಹರಿದ್ವಾರದಲ್ಲಿ ದಾಳಿ ನಡೆಸಿದೆ. ಈ ವೇಳೆ 4,50,00,000 ರೂ. ಮೌಲ್ಯದ ಹಳೆಯ ಕರೆನ್ಸಿಯೊಂದಿಗೆ 6 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Advertisement
70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ಫೆಬ್ರವರಿ 14 ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಎಸ್ಟಿಎಫ್ ಅವ್ಯಾವಹಾರ ನಡೆಯದಂತೆ ಎಲ್ಲ ಪಕ್ಷದವರ ಮೇಲೆ ಕಣ್ಣಿಟ್ಟಿದೆ. ಈ ವೇಳೆ ಎಸ್ಟಿಎಫ್ ಅಧಿಕಾರಿಗಳು ಹರಿದ್ವಾರದಲ್ಲಿ ಹಳೆ ಕರೆನ್ಸಿ ಇರುವುದರ ಮಾಹಿತಿ ಮೇರೆಗೆ ದಾಳಿ ಮಾಡಿದ್ದು, 6 ಜನರು ಹಳೆ ನೋಟುಗಳೊಂದಿಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಕೆಟ್ಟದಾಗಿ ಮುಟ್ಟಿದ್ದಕ್ಕಾಗಿ ಛೀಮಾರಿ ಹಾಕಿದ ಮಹಿಳೆಯನ್ನೇ ಕೊಲ್ಲಲು ಮುಂದಾದ ವ್ಯಕ್ತಿ ಅರೆಸ್ಟ್
Advertisement
Advertisement
ಎಸ್ಟಿಎಫ್ ಹಿರಿಯ ಪೊಲೀಸ್ ಅಧೀಕ್ಷಕ(ಎಸ್ಎಸ್ಪಿ) ಅಜಯ್ ಸಿಂಗ್ ಈ ಕುರಿತು ಪ್ರತಿಕ್ರಿಯಿಸಿದ್ದು, ಹಳೆಯ ಕರೆನ್ಸಿಯೊಂದಿಗೆ ಸಿಕ್ಕಿಬಿದ್ದಿರುವ ಮೂವರು ಹರಿದ್ವಾರದವರು ಮತ್ತು ಉಳಿದವರು ಉತ್ತರ ಪ್ರದೇಶದವರಾಗಿದ್ದಾರೆ. ಪ್ರಸ್ತುತ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಹೆಚ್ಚು ಮಾಹಿತಿ ತಿಳಿದುಕೊಳ್ಳಲು ಹೆಚ್ಚಿನ ತನಿಖೆ ಸಹ ನಡೆಸಲಾಗುತ್ತಿದೆ ಎಂದು ತಿಳಿಸಿದರು.
Advertisement
ವಿಧಾನಸಭೆ ಚುನಾವಣೆ ಫೆಬ್ರವರಿ 14 ರಂದು ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಪರಿಣಾಮ ಚುನಾವಣೆಗೆ ಪಕ್ಷಗಳು ಬಾರಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. ಇದನ್ನೂ ಓದಿ: ಉನ್ನತ ಶಿಕ್ಷಣ ಸಚಿವರು ನಮಗೆ ಕೊಟ್ಟಿದ್ದು ಸಿಹಿಯಲ್ಲ, ಕಹಿ: ಅತಿಥಿ ಉಪನ್ಯಾಸಕರ ಆಕ್ರೋಶ