ಕಲಬುರಗಿ: ಕಳ್ಳರು ತಮ್ಮ ಕೈ ಚಳಕ ತೋರಿಸಿ ಒಂದೇ ರಾತ್ರಿಯಲ್ಲಿ 6 ಮನೆಗಳಿಗೆ ಕನ್ನ ಹಾಕಿ 4.87 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಕಲುಬುರಗಿಯ (Kalaburagi) ಆಳಂದ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಬುಧವಾರ ತಡರಾತ್ರಿ ಗ್ರಾಮದ ಬಸವರಾಜ ಬಿರಾದಾರ್ ಎಂಬುವವರು ಮಹಾರಾಷ್ಟ್ರದ ಸಂಬಂಧಿಕರ ಮನೆಗೆ ಹೋಗಿದ್ದರು. ಈ ವೇಳೆ ಅವರ ಮನೆಯ ಅಲ್ಮೇರಾದಲ್ಲಿದ್ದ 4.87 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿದ್ದಾರೆ. ಅದೇ ರೀತಿ ಬೆಂಗಳೂರಿಗೆ ವಲಸೆ ಹೋಗಿರುವ ಐದು ಮನೆಗಳ ಬೀಗ ಮುರಿದು ಚಿನ್ನಾಭರಣ ದೋಚಿದ್ದಾರೆ. ಬಳಿಕ ಮನೆಗಳಲ್ಲಿನ ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಎಸೆದು ಖದೀಮರು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಕೂಡಲೇ ಶರಣಾಗಿ ಇಲ್ದಿದ್ರೆ ಕಾರ್ಯಾಚರಣೆ ಮಾಡ್ತೇವೆ- ಕಾಡಲ್ಲಿ ಅವಿತಿರುವ ನಕ್ಸಲರಿಗೆ ಪ್ರಣಬ್ ಮೊಹಂತಿ ಎಚ್ಚರಿಕೆ
Advertisement
Advertisement
ಘಟನಾ ಸ್ಥಳಕ್ಕೆ ಸಿಪಿಐ ಪ್ರಕಾಶ್ ಯಾತನೂರು, ಪಿಎಸ್‌ಐ ಸಿದ್ದರಾಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನರೋಣಾ (Narona) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ | ಮೈತ್ರಿ ಕೂಟಕ್ಕೆ ಮುನ್ನಡೆ, ಕಾಂಗ್ರೆಸ್‌ಗೆ ಬಿಗ್ ಶಾಕ್!
Advertisement