ಕೊಲಂಬೋ: ಶ್ರೀಲಂಕಾದ ನೌಕಾಪಡೆಯು ಭಾನುವಾರ ಗಡಿ ದಾಟಿದ ಆರೋಪದ ಮೇರೆಗೆ 6 ಭಾರತೀಯ ಮೀನುಗಾರರನ್ನು ಬಂಧಿಸಿದೆ.
ಭಾರತೀಯ ಮೀನುಗಾರರು ಶ್ರೀಲಂಕಾದ ಜಲಪ್ರದೇಶಕ್ಕೆ ಹೋದ ಹಿನ್ನೆಲೆಯಲ್ಲಿ ಅವರ ಬೋಟ್‍ನ್ನು ವಶಪಡಿಸಿಕೊಂಡು, 6 ಮೀನುಗಾರರನ್ನು ಬಂಧಿಸಿದ್ದಾರೆ. ಇದು ಒಂದು ತಿಂಗಳ ಅವಧಿಯಲ್ಲಿ ಎರಡನೇ ಘಟನೆಯಾಗಿದೆ.
Advertisement
Advertisement
ಮನ್ನಾರ್ ದ್ವೀಪದ ವಾಯುವ್ಯ ಕರಾವಳಿಯಲ್ಲಿರುವ ವಸಾಹತು ಪ್ರದೇಶವಾದ ತಲೈಮನ್ನಾರ್‌ನಲ್ಲಿ ಮೀನುಗಾರರನ್ನು ಬಂಧಿಸಲಾಗಿದೆ ಎಂದು ನೌಕಾಪಡೆ ತಿಳಿಸಿದೆ. ತಲೈಮನ್ನಾರ್‌ನಲ್ಲಿ ನೌಕಾಪಡೆಯ ವಶದಲ್ಲಿರುವ ಮೀನುಗಾರರನ್ನು ಮನ್ನಾರ್‌ನಲ್ಲಿರುವ ಮೀನುಗಾರಿಕಾ ನಿರೀಕ್ಷಕರಿಗೆ ಹಸ್ತಾಂತರಿಸಲಾಗುವುದು ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್ ಶಾಕ್‍ನಿಂದ ದಂಪತಿ ಸಾವು- ಪತ್ನಿ ಉಳಿಸಲು ಹೋಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದುರ್ಮರಣ
Advertisement
ಆಗಸ್ಟ್ 22 ರಂದು ಶ್ರೀಲಂಕಾದ ಗಡಿ ಪ್ರವೇಶಿಸಿದ ಆರೋಪದ ಮೇಲೆ 10 ಭಾರತೀಯ ಮೀನುಗಾರರನ್ನು ಬಂಧಿಸಿದ್ದರು. ಇದಾದ ಬಳಿಕ ಇಂದು ಮತ್ತೆ ಬಂಧಿಸಿದ್ದಾರೆ. ಇದನ್ನೂ ಓದಿ: ಗಣೇಶ ಮೂರ್ತಿಯೊಂದಿಗೆ ಸಾವರ್ಕರ್ ಫೋಟೋವನ್ನೂ ಇಡ್ತೀವಿ – ಚಕ್ರವರ್ತಿ ಸೂಲಿಬೆಲೆ
Advertisement