ಮುಂಬೈ: ದಕ್ಷಿಣ ಆಫ್ರಿಕಾ ಸೇರಿದಂತೆ ಇತರ ಅಪಾಯಕಾರಿ ದೇಶದಿಂದ ಮಹಾರಾಷ್ಟ್ರಕ್ಕೆ ಆಗಮಿಸಿದ ಆರು ಮಂದಿ ಪ್ರಯಾಣಿಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Advertisement
ಮುಂಬೈ ಕಾರ್ಪೊರೇಷನ್ , ಕಲ್ಯಾಣ್-ಡೊಂಬಿವಲಿ ಕಾರ್ಪೊರೇಷನ್, ಮೀರಾ-ಭಯಂದರ್ ಕಾರ್ಪೊರೇಷನ್ ಮತ್ತು ಪುಣೆಯಲ್ಲಿ ತಲಾ ಒಬ್ಬರು ಮತ್ತು ಪಿಂಪ್ರಿ-ಚಿಂಚ್‍ವಾಡ್ ಕಾರ್ಪೊರೇಷನ್‍ನಲ್ಲಿ ನೈಜೀರಿಯಾದಿಂದ ಬಂದ ಇಬ್ಬರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ರಾಜ್ಯ ಸಾರ್ವಜನಿಕ ಆರೋಗ್ಯ ಇಲಾಖೆ ಮಂಗಳವಾರ ತಿಳಿಸಿದೆ. ಇದನ್ನೂ ಓದಿ: ಓಮಿಕ್ರಾನ್ ಹಾಗೂ ಡೆಲ್ಟಾ ವೈರಸ್ ನಡುವಿನ ವ್ಯತ್ಯಾಸವೇನು?
Advertisement
Advertisement
ಇದೀಗ ಸೋಂಕಿತರ ರಕ್ತದ ಮಾದರಿಗಳನ್ನು ಜೀನೋಮಿಕ್ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಅವರೊಂದಿಗೆ ಸಂಪರ್ಕ ಹೊಂದಿದ್ದವರನ್ನು ಪತ್ತೆಹಚ್ಚುವ ಕಾರ್ಯ ನಡೆಸಲಾಗುತ್ತಿದೆ. ಈ ಎಲ್ಲಾ ಪ್ರಯಾಣಿಕರಿಗೂ ಕೋವಿಡ್ -19 ಸೋಂಕು ದೃಢವಾಗಿದ್ದು, ಅವರಿಗೆ ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿಸಲಾಗಿದೆ.
Advertisement
ಮತ್ತೊಂದೆಡೆ, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡಿಸೆಂಬರ್ 1 ರಿಂದ ಇತರ ರಾಷ್ಟ್ರಗಳಿಂದ ಆಗಮಿಸುವ ಪ್ರಯಾಣಿಕರನ್ನು ಕ್ವಾರಂಟೈನ್‍ಗೊಳಿಸುವುದಾಗಿ ತಿಳಿಸಿದೆ. ಇದನ್ನೂ ಓದಿ: ಕೋವಿಡ್ ವಾರಿಯರ್ಸ್‌ಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ: ಸಿಎಂ