ಚೆನೈ: ಕಾರು (Car) ಮತ್ತು ತಮಿಳುನಾಡಿನ (Tamil Nadu) ಸರ್ಕಾರಿ ಬಸ್ (Bus) ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆರು ಜನ ಸಾವನ್ನಪ್ಪಿದ ಘಟನೆ ತಿರುವಣ್ಣಾಮಲೈನ ಅಂಧನೂರ್ ಬೈಪಾಸ್ ಬಳಿ ನಡೆದಿದೆ.
ಕಾರಿನಲ್ಲಿದ್ದ ಪ್ರಯಾಣಿಕರು ತಿರುವಣ್ಣಾಮಲೈನಿಂದ ಬೆಂಗಳೂರಿಗೆ (Bengaluru) ತೆರಳುತ್ತಿದ್ದರು. ಈ ವೇಳೆ ಸೆಂಗಂ ಬಳಿ ಅಪಘಾತ ಸಂಭವಿಸಿದೆ. ಪರಿಣಾಮ ಸ್ಥಳದಲ್ಲೇ ಆರು ಜನ ಮೃತಪಟ್ಟಿದ್ದಾರೆ. ಕಾರಿನಲ್ಲಿ ಹತ್ತು ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಶ್ರೀನಿವಾಸ್ ಹತ್ಯೆ ಪ್ರಕರಣ- ಇಬ್ಬರು ಆರೋಪಿಗಳಿಗೆ ಗುಂಡೇಟು
ಬಸ್ಸಿನಲ್ಲಿದ್ದ ಸುಮಾರು 10 ಪ್ರಯಾಣಿಕರಿಗೂ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳನ್ನು ಸೆಂಗಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಸೆಂಗಂ ಠಾಣೆಯ ಪೊಲೀಸರು (Police) ತನಿಖೆ ಆರಂಭಿಸಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ: ಐತಿಹಾಸಿಕ ಮೈಸೂರು ದಸರಾ ಮಹೋತ್ಸವ- ಜಂಬೂಸವಾರಿ ಕಣ್ತುಂಬಿಕೊಳ್ಳಲು ಕಾತುರ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]