LatestLeading NewsMain PostNational

ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದ ಟ್ರಕ್‌ – 6 ಮಂದಿ ದುರ್ಮರಣ, 10 ಮಂದಿಗೆ ಗಾಯ

ಭೋಪಾಲ್: ಬಸ್‌ಗಾಗಿ ಕಾಯುತ್ತಾ ನಿಲ್ದಾಣದಲ್ಲಿ ನಿಂತಿದ್ದ ಜನರ ಗುಂಪಿನ ಮೇಲೆ ವೇಗವಾಗಿ ಬಂದ ಟ್ರಕ್‌ ಹರಿದು 6 ಮಂದಿ ಮೃತಪಟ್ಟಿರುವ ದುರಂತ ಘಟನೆ ಮಧ್ಯಪ್ರದೇಶದ (Madhya Pradesh) ರತ್ಲಮ್‌ ಜಿಲ್ಲೆಯಲ್ಲಿ ನಡೆದಿದೆ.

ದುರಂತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಎಂಟು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಿಲ್ಲಾಧಿಕಾರಿ ನರೇಂದ್ರ ಕುಮಾರ್ ಸೂರ್ಯವಂಶಿ ತಿಳಿಸಿದ್ದಾರೆ. ಇದನ್ನೂ ಓದಿ: ಪುಸ್ತಕದಲ್ಲಿ ಹಿಂದೂ ವಿರೋಧಿ ಉಲ್ಲೇಖ – ಲೇಖಕರು ಸೇರಿ ನಾಲ್ವರ ವಿರುದ್ಧ ಕೇಸ್

ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದ ಟ್ರಕ್‌ - 6 ಮಂದಿ ದುರ್ಮರಣ, 10 ಮಂದಿಗೆ ಗಾಯ

ಟ್ರಕ್‌ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಟ್ರಕ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ತಿವಾರಿ ತಿಳಿಸಿದ್ದಾರೆ.

ಬಸ್‌ ನಿಲ್ದಾಣದಲ್ಲಿ ಸುಮಾರು 20 ಮಂದಿ ನಿಂತಿದ್ದೆವು. ಈ ವೇಳೆ ವೇಗವಾಗಿ ಬಂದ ಟ್ರಕ್‌ ನಮ್ಮ ಗುಂಪಿನ ಮೇಲೆ ಹರಿಯಿತು ಎಂದು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಗುಜರಾತ್ ಚುನಾವಣೆ- ತಾಯಿಯ ಆಶೀರ್ವಾದ ಪಡೆದ ಮೋದಿ

Live Tv

Leave a Reply

Your email address will not be published. Required fields are marked *

Back to top button