ಕೋಲ್ಕತ್ತಾ: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ (Explosion) ಸಂಭವಿಸಿ ಮೂವರು ಮಕ್ಕಳು ಸೇರಿದಂತೆ 6 ಜನ ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ (West Bengal)) ದಕ್ಷಿಣ 24 ಪರಗಣ ಜಿಲ್ಲೆಯ ಪಥಾರ್‌ಪ್ರತಿಮಾದಲ್ಲಿ ನಡೆದಿದೆ.
ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಥಳೀಯ ನಿವಾಸಿ ಚಂದ್ರನಾಥ್ ಬಾನಿಕ್ ಎಂಬವರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ಶಬ್ದದಿಂದ ಸ್ಥಳೀಯ ಜನರು ಎಚ್ಚರಗೊಂಡು ನೋಡಿದಾಗ ಕಟ್ಟಡಕ್ಕೆ ಸಂಪೂರ್ಣ ಬೆಂಕಿ ಆವರಿಸಿತ್ತು. ಈ ವೇಳೆ ಸ್ಥಳೀಯರು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ನಂತರ, ಹತ್ತಿರದ ಧೋಲಾಹತ್ ಪೊಲೀಸ್ ಠಾಣೆಯ ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಇದನ್ನೂ ಓದಿ: ಟೀಚರಮ್ಮನ ಒಂದು ಮುತ್ತಿಗೆ 50,000 ರೂ. – ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಹನಿಟ್ರ್ಯಾಪ್ ಬೆದರಿಕೆ
ಸಾವುನೋವುಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಅಕ್ರಮ ಪಟಾಕಿ ಕಾರ್ಖಾನೆ ಹಾಗೂ ಗೋದಾಮಿನ ಸ್ಫೋಟಗಳಿಂದಾಗಿ ಪಶ್ಚಿಮ ಬಂಗಾಳವು ರಾಷ್ಟ್ರೀಯ ಸುದ್ದಿಯಲ್ಲಿದೆ.
ಈ ವರ್ಷ ಫೆಬ್ರವರಿಯಲ್ಲಿ, ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕಲ್ಯಾಣಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದ ನಂತರ ನಾಲ್ವರು ಸಾವನ್ನಪ್ಪಿದ್ದರು. 2023 ರಲ್ಲಿ, ಪೂರ್ವ ಮಿಡ್ನಾಪುರ ಜಿಲ್ಲೆಯ ಎಗ್ರಾದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ 9 ಜನರು ಸಾವನ್ನಪ್ಪಿದ್ದರು. ಇದನ್ನೂ ಓದಿ: ಮಹಿಳೆ ಅನುಮಾನಾಸ್ಪದ ಸಾವು – ಪತಿಯ ಅಕ್ರಮ ಸಂಬಂಧದಿಂದ ಕೊಲೆ ಆರೋಪ