ಜೆರುಸಲೇಂ/ಸೌತ್ ಕೊರಿಯಾ: ಈಗಾಗಲೇ ಡೆಲ್ಟಾ, ಡೆಲ್ಟಾಪ್ಲಸ್, ಓಮಿಕ್ರಾನ್ ತಳಿಗಳಾಗಿ ರೂಪ ಬದಲಿಸಿರುವ ಕೊರೊನಾ ಸೋಂಕು ಇದೀಗ ಮತ್ತೆ ಹೊಸ ರೂಪ ಬದಲಿಸಿದೆ. ದೇಶ – ವಿದೇಶಗಳಲ್ಲಿ ಮತ್ತೆ ಕೊರೊನಾ ಸೋಂಕು ಆರ್ಭಟಿಸುತ್ತಿದ್ದು, ಕಳೆದ ಒಂದೇ ವಾರದಲ್ಲಿ ವಿವಿಧೆಡೆಯಿಂದ 11 ಮಿಲಿಯನ್‍ನಷ್ಟು ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ತಿಳಿಸಿದೆ.
ಇಸ್ರೇಲ್‍ನ ಆರೋಗ್ಯ ಸಚಿವಾಲಯವು ಎರಡು ಹೊಸ ಕೋವಿಡ್ ರೂಪಾಂತರ ಪ್ರಕರಣಗಳನ್ನು ದಾಖಲಿಸಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ಇದರಿಂದ ಹೆಚ್ಚು ಆತಂಕ ಪಡುವ ಅವಶ್ಯಕತೆಯಿಲ್ಲವೆಂದೂ ಅವರು ಸಲಹೆ ನೀಡಿದ್ದಾರೆ.
Advertisement
Advertisement
ಕೋವಿಡ್-19 ರೂಪಾಂತರಿಯ ಓಮಿಕ್ರಾನ್ ಆವೃತ್ತಿಯ ಎರಡು ಉಪ-ವ್ಯತ್ಯಯಗಳನ್ನು ಸಂಯೋಜಿಸುವ ಈ ರೂಪಾಂತರಿಗಳನ್ನು ಸ್ಟ್ರೈನ್ ಬಿಎ-1 ಹಾಗೂ ಬಿಎ-2 ಎಂದು ಹೆಸರಿಸಲಾಗಿದೆ. ಇಸ್ರೇಲ್‍ನ ಬೆನ್ ಗುರಿಯನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಇಬ್ಬರು ಪ್ರಯಾಣಿಕರ ಮೇಲೆ ಆರ್‍ಟಿಪಿಸಿಆರ್ ಪರೀಕ್ಷೆ ನಡೆಸಿದ ವೇಳೆ ರೊಪಾಂತರಿ ಪತ್ತೆಯಾಗಿದೆ. `ಈ ರೂಪಾಂತರವು ಪ್ರಪಂಚದಾದ್ಯಂತ ಇನ್ನೂ ತಿಳಿದಿಲ್ಲ’ ಎಂಬ ಕುತೂಹಲಕಾರಿ ಮಾಹಿತಿಯನ್ನು ಆರೋಗ್ಯ ಸಚಿವಾಲಯವು ಹೊರಹಾಕಿದೆ. ಜ್ವರ, ತಲೆನೋವು ಮತ್ತು ಸ್ನಾಯು ಡಿಸ್ಟ್ರೋಫಿಯ ಸೌಮ್ಯ ಲಕ್ಷಣಗಳಿಂದ ಬಳಲುತ್ತಿದ್ದ ಇಬ್ಬರಲ್ಲಿ ಈ ರೂಪಾಂತರಿಯನ್ನು ಪತ್ತೆಹಚ್ಚಲಾಗಿದೆ. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ‘ಜೇಮ್ಸ್’ ಸಿನಿಮಾ: ಅಭಿಮಾನಿಗಳ ಫಸ್ಟ್ ರಿಯ್ಯಾಕ್ಷನ್
Advertisement
ಭಾರತದಲ್ಲಿ ನಿಗಾ ವಹಿಸಲು ಸೂಚನೆ:
ಯುರೋಪ್ ಮತ್ತು ಪೂರ್ವ ಏಷ್ಯಾದ ಕೆಲ ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನಿಗಾ ಹಾಗೂ ಜಾಗರೂಕತೆ ವಹಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,539 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, 60 ಮಂದಿ ಮೃತಪಟ್ಟಿದ್ದಾರೆ. ಈ ಬೆನ್ನಲ್ಲೇ ಉನ್ನತ ಸಭೆ ನಡೆಸಿರುವ ಅವರು, ಜಿನೋಮ್ ಸಿಕ್ವೆನ್ಸಿಂಗ್ ಪರೀಕ್ಷೆಗಳನ್ನು ಹೆಚ್ಚಿಸುವಂತೆಯೂ ಸೂಚನೆ ನೀಡಿದ್ದಾರೆ.
Advertisement
ಒಂದೇ ದಿನ 6 ಲಕ್ಷ ಕೊರೊನಾ ಪ್ರಕರಣ!
ದಕ್ಷಿಣ ಕೊರಿಯಾದಲ್ಲಿ ಕೊರೊನಾ ರೂಪಾಂತರಿಯಾದ ಓಮಿಕ್ರಾನ್ ಆರ್ಭಟವು ಮುಂದುವರಿದಿದ್ದು, ಬುಧವಾರ ಒಂದೇ ದಿನ 6 ಲಕ್ಷಕ್ಕೂ ಅಧಿಕ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ದಕ್ಷಿಣ ಕೊರಿಯಾದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದಲ್ಲಿ ಕೊರೊನಾ ಪ್ರಕರಣ ದಾಖಲಾಗಿರುವುದು ಕಂಡುಬಂದಿದೆ. ಇದನ್ನೂ ಓದಿ: ರವಿವರ್ಮಾ ಸ್ಟಂಟ್‌ಗೆ ಪವರ್ ಸ್ಟಾರ್ ಫಿದಾ: ಫೋನ್ ಮಾಡಿ ಪುನೀತ್ ಹೇಳಿದ್ದೇನು?
ಕೊರಿಯಾ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಸಂಸ್ಥೆ ಈ ಸಂಬಂಧ ಮಾಹಿತಿ ನೀಡಿದ್ದು, ದಕ್ಷಿಣ ಕೊರಿಯಾದಲ್ಲಿ ಮಂಗಳವಾರ 4,00,741 ಪ್ರಕರಣಗಳು ಪತ್ತೆಯಾಗಿತ್ತು. ಆದರೆ ಬುಧವಾರ 6,21,328 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 429 ಮಂದಿ ಮೃತಪಟ್ಟಿದ್ದಾರೆ. ಇದರಿಂದಾಗಿ ಒಂದೇ ದಿನದಲ್ಲಿ ಶೇ.55 ರಷ್ಟು ಕೊರೊನಾ ಸೋಂಕು ವ್ಯಾಪಿಸಿರುವುದು ಜನರಲ್ಲಿ ಆತಂಕ ಮೂಡಿಸಿದೆ.
ಈವರೆಗೆ ದಕ್ಷಿಣ ಕೊರಿಯಾದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 82,50,592ಕ್ಕೆ ಏರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕೊರಿಯಾ ಸರ್ಕಾರ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನು ಕಟ್ಟಿನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ.