ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಜನವರಿ 28ಕ್ಕೆ 6 ತಿಂಗಳು ಪೂರ್ಣಗೊಳ್ಳಲಿದ್ದು, ಹೈಕಮಾಂಡ್ ರಿಪೋರ್ಟ್ ಕಾರ್ಡ್ ತರಿಸಿಕೊಂಡಿದೆ. ಈ ರಿಪೋರ್ಟ್ ಕಾರ್ಡ್ ಆಧರಿಸಿ ವರಿಷ್ಠರು ಮುಂದಿನ ನಡೆ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಪಬ್ಲಿಕ್ ಟಿವಿಗೆ ಖಚಿತ ಮಾಹಿತಿ ಲಭ್ಯವಾಗಿದೆ.
ಸಚಿವರ ಕಾರ್ಯವೈಖರಿಯನ್ನು ಸಚಿವ ಸಂಪುಟ ಪುನಾರಚನೆಗೂ ಮುನ್ನ ಪರಿಶೀಲನೆ ನಡೆಸಲಾಗುವುದು. ಇಲಾಖೆ, ಪಕ್ಷದ ಚಟುವಟಿಕೆ, ಸರ್ಕಾರದ ಸಮರ್ಥನೆ ಹೀಗೆ ಹಲವು ಆಯಾಮಗಳಲ್ಲಿ ಮಾಹಿತಿ ಪಡೆದಿರುವ ವರಿಷ್ಠರು ವರದಿ ಆಧರಿಸಿ ಕ್ರಿಯಾಶೀಲರಲ್ಲದ ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ಉಸ್ತುವಾರಿ ಸಚಿವರ ಕಿತ್ತಾಟ – ಮಾಧುಸ್ವಾಮಿ, ಸೋಮಣ್ಣ, ಎಂಟಿಬಿಗೆ ಅಸಮಾಧಾನ
ಸಚಿವರ, ಸರ್ಕಾರದ ರಿಪೋರ್ಟ್ ತರಿಸಿಕೊಳ್ಳಲು ಕಾರಣ ಏನು?
* ಪಂಚರಾಜ್ಯಗಳ ಚುನಾವಣೆ ಬೆನ್ನಲ್ಲೇ ಸಂಪುಟ ವಿಸ್ತರಣೆ ಮಾಡಬೇಕು
* ಕ್ರಿಯಾಶೀಲರಲ್ಲದ ಸಚಿವರನ್ನು ಗುರುತಿಸುವುದು
* ಒಂದು ವರ್ಷಕ್ಕೂ ಮುನ್ನ ಚುನಾವಣೆಗೆ ಪಕ್ಷ ಮತ್ತು ಸರ್ಕಾರವನ್ನು ಸಜ್ಜುಗೊಳಿಸಬೇಕಿರುವ ಹೈಕಮಾಂಡ್
* ಕಡೆಯ ಒಂದೂವರೆ ವರ್ಷದಲ್ಲಿ ಜನರಲ್ಲಿ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡಿಸುವುದು
* ಈ ಹಿನ್ನೆಲೆ ಸಮರ್ಥವಾಗಿ ಕಾರ್ಯನಿರ್ವಹಿಸುವ ಸಚಿವರನ್ನು ಉಳಿಸಿಕೊಂಡು ಉಳಿದವರನ್ನು ಕೈ ಬಿಡುವುದು
* ರಿಪೋರ್ಟ್ ಪರಿಶೀಲಿಸಿ, ಚುನಾವಣೆ ಬೆನ್ನಲ್ಲೇ ಸಂಪುಟಕ್ಕೆ ಸರ್ಜರಿ ಮಾಡಲಿರುವ ಹೈಕಮಾಂಡ್
* ಅಲ್ಲದೇ ಸರ್ಕಾರದಲ್ಲಿ ಆಗಬೇಕಿರುವ ಬದಲಾವಣೆ ಗುರುತಿಸಿ ಸಿಎಂ ಬೊಮ್ಮಾಯಿಗೆ ಟಾರ್ಗೆಟ್ ನೀಡುವುದು