- ಪ್ರತಿಜ್ಞಾವಿಧಿ ಬೋಧಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ (Karnataka High Court) ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ರಾಘವೇಂದ್ರ ಸೀತಾರಾಂ ಶ್ರೀವತ್ಸ, ಶ್ರೀಮತಿ ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್ ಮತ್ತು ಹೊಂಬೇಗೌಡ ಶಾಂತಿ ಭೂಷಣ್ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ (Thawar Chand Gehlot) ಪ್ರಮಾಣ ವಚನ ಸ್ವೀಕರಿಸಿದರು.
ಇಂದು ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇದನ್ನೂ ಓದಿ: ಬೇಡ ಸರ್, ಹೊಡೆಯುವುದು ಬಿಡಿ ಎಂದರೂ ಹೊಡೆದರು; ಸಿಗರೇಟ್‌ನಿಂದ ಸುಟ್ಟರು – ದರ್ಶನ್ ಬಗ್ಗೆ ಮಾಫಿ ಸಾಕ್ಷಿ ಪ್ರದೋಷ್ ಹೇಳಿದ್ದೇನು?


ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಬು ಭಖ್ರು ಸೇರಿದಂತೆ, ಉಚ್ಚನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಇದನ್ನೂ ಓದಿ: ಅರ್ಜಿ ವಾಪಸ್ ಪಡೆದ ಸಂಗೀತ – ಸಿಎಂ ವಿಜಯ್ ವಿಚ್ಛೇದನ ಪ್ರಕರಣ ಇತ್ಯರ್ಥ

