ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ದುರಂತ -6 ನವಜಾತ ಶಿಶುಗಳು ಬಲಿ

Public TV
2 Min Read
6 newborns killed in massive fire at Delhi childrens hospital

ನವದೆಹಲಿ: ಶನಿವಾರ ತಡರಾತ್ರಿ ದೆಹಲಿಯ (Delhi) ಮಕ್ಕಳ ಆಸ್ಪತ್ರೆಯಲ್ಲಿ (Children’s Hospital) ಸಂಭವಿಸಿದ ಭಾರೀ ಬೆಂಕಿ ದುರಂತದಲ್ಲಿ (Massive Fire) ಕನಿಷ್ಠ 6 ನವಜಾತ ಶಿಶುಗಳು ಸಾವನ್ನಪ್ಪಿವೆ.

ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಬೇಬಿ ಕೇರ್ ಸೆಂಟರ್‌ನಲ್ಲಿ ರಾತ್ರಿ 11:32ಕ್ಕೆ ಬೆಂಕಿ ಕಾಣಿಸಿಕೊಂಡಿತ್ತು. 16 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಬಂದು ಭಾನುವಾರ ಮುಂಜಾನೆಯವರೆಗೂ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

12 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐವರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ. ಇದನ್ನೂ ಓದಿ: ಚನ್ನಗಿರಿ ಠಾಣೆಯ ಮೇಲೆ ಕಲ್ಲು ತೂರಾಟ – 11 ಮಂದಿ ವಶಕ್ಕೆ

ಆಸ್ಪತ್ರೆಯೊಳಗೆ ಇಡಲಾಗಿದ್ದ ಹಲವಾರು ಆಮ್ಲಜನಕ ಸಿಲಿಂಡರ್‌ಗಳೂ ಬೆಂಕಿಗೆ ಆಹುತಿಯಾಗಿವೆ. ಒಂದು ಆಸ್ಪತ್ರೆ ಕಟ್ಟಡ ಮತ್ತು ಎರಡು ಮಹಡಿಗಳು ವಸತಿ ಕಟ್ಟಡಗಳು ಬೆಂಕಿಯಿಂದ ಹಾನಿಗೊಳಗಾಗಿವೆ.

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಸಂಭವಿಸಿದ ದೊಡ್ಡ ಅಗ್ನಿ ದುರಂತ ನಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ. ಗೇಮಿಂಗ್‌ ಸೆಂಟರ್‌ನಲ್ಲಿ ನಡೆದ ದುರ್ಘಟನೆಯಲ್ಲಿ 9 ಮಕ್ಕಳು ಸೇರಿದಂತೆ 24 ಮಂದಿ ಬಲಿಯಾಗಿದ್ದರು.

Share This Article